ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಿಮೆಯಾದ ಪರಿಸರ ಕಾಳಜಿ: ಸಂಗೀತ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲಲಿತಮ್ಮ ಕಳವಳ

ಸಂಗೀತ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲಲಿತಮ್ಮ ಕಳವಳ
Last Updated 22 ಸೆಪ್ಟೆಂಬರ್ 2020, 1:44 IST
ಅಕ್ಷರ ಗಾತ್ರ

ವಿಜಯಪುರ: ಸಮಾಜವು ಆಧುನಿಕ ಜೀವನ ಶೈಲಿಗೆ ಮಾರುಹೋಗಿದ್ದು, ಪರಿಸರದ ಬಗ್ಗೆ ಕಾಳಜಿ ಕಡಿಮೆಯಾಗಿದೆ. ನಗರವಷ್ಟೇ ಅಲ್ಲ, ಗ್ರಾಮೀಣ ಭಾಗದಲ್ಲೂ ಸ್ವಚ್ಛತೆ ಕಾಪಾಡಿಕೊಳ್ಳುವ ಕುರಿತು ಗಮನ ಹರಿಸುತ್ತಿಲ್ಲ ಎಂದುಸಂಗೀತ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲಲಿತಮ್ಮ ಹೇಳಿದರು.

ಚನ್ನರಾಯಪಟ್ಟಣ ಹೋಬಳಿ ಗಂಗವಾರ-ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಸ್ವಸಹಾಯ ಸಂಘಗಳ ಫಲಾನುಭವಿಗಳಿಗೆ ಸಸಿಗಳನ್ನು ವಿತರಿಸಿ ಅವರು ಮಾತನಾಡಿದರು.

ಗ್ರಾಮಗಳು ಕಸದ ತೊಟ್ಟಿಗಳಾಗಿ ಮಾರ್ಪಟ್ಟಿವೆ. ಕಲ್ಯಾಣಿ, ಕೆರೆಗಳು ಹಾಳಾಗಿವೆ. ಪ್ರಕೃತಿಗೆ ಮಾಡುವ ಸಹಾಯವೆಂದರೆ ಅದನ್ನು ಹಾಳು ಮಾಡದಂತೆ ನೋಡಿಕೊಳ್ಳುವುದು. ಈ ಬಗ್ಗೆ ಎಲ್ಲರೂ ಯೋಚಿಸುತ್ತಲೇ ಇದ್ದಾರೆ. ಆದರೆ, ಸ್ವಯಂ ಜಾಗೃತಿ ಹೆಚ್ಚಾಗಬೇಕಿದೆ. ಅದೇ ನಾವು ಪ್ರಕೃತಿಗೆ ನೀಡುವ ಗೌರವವಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ ಮಾತನಾಡಿ, 30 ವರ್ಷಗಳ ಹಿಂದೆ ಬಾವಿ ತೋಡಿದರೆ ನೀರು ಬರುತ್ತಿತ್ತು. ಈಗ 1,500 ಅಡಿ ಬೋರ್ ಕೊರೆದರೂ ನೀರು ಬರುತ್ತಿಲ್ಲ. ಮುಂದಿನ ಪಿಳೀಗೆಗೆ ಒಳ್ಳೆಯ ಬದುಕು ನೀಡುವ ನಿಟ್ಟಿನಲ್ಲಿ ಉತ್ತಮ ಪರಿಸರ ನೀಡುವ ಗುರುತರ ಜವಾಬ್ದಾರಿ ಎಲ್ಲರ ಮೇಲಿದೆ. ಅಂತರ್ಜಲ ಹೆಚ್ಚಿಸಲು ಮತ್ತು ಮಣ್ಣಿನ ಸವಕಳಿ ತಡೆಯಲು ಗಿಡಗಳನ್ನು ನೆಡಬೇಕಿದೆ ಎಂದರು.

ಎಂ.ಬಿ.ಕೆ. ಮಮತಾ, ಲಕ್ಷ್ಮೀ, ರಾಜಣ್ಣ, ರಮ್ಯ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಉಷಾ, ನಾರಾಯಣಮ್ಮ, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT