ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿವಿ ಕಾರ್ಯಕ್ರಮಗಳ ದೂರು ನಿಯಂತ್ರಣ ಕೊಠಡಿ ಸ್ಥಾಪನೆ

Last Updated 13 ಡಿಸೆಂಬರ್ 2019, 17:30 IST
ಅಕ್ಷರ ಗಾತ್ರ

ದೇವನಹಳ್ಳಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಕೇಬಲ್ ಟಿವಿ ಹಾಗೂ ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ದೂರುಗಳಿದ್ದಲ್ಲಿ, ದೂರು ದಾಖಲಿಸಲು24x7 ದೂರು ಕೋಶ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.

ಕೇಬಲ್ ಟೆಲಿವಿಷನ್ ನೆಟ್‌ವರ್ಕ್ (ರೆಗ್ಯುಲೇಷನ್) ಆ್ಯಕ್ಟ್ 1995ರ ಪರಿಚ್ಛೇದ 6 ಕಾರ್ಯಕ್ರಮ ಸಂಹಿತೆಯಂತೆ ಸೇವೆಯಲ್ಲಿ ಪ್ರಸಾರವಾಗುವ ಯಾವುದೇ ಕಾರ್ಯಕ್ರಮವು ಸದಭಿರುಚಿ ಅಥವಾ ಸಭ್ಯತೆ ವಿರುದ್ಧ, ಮಿತ್ರ ರಾಷ್ಟ್ರಗಳ ಟೀಕೆ, ಧರ್ಮ, ಸಮುದಾಯ ಅಥವಾ ಧಾರ್ಮಿಕ ಸಮೂಹಗಳನ್ನು ನಿಂದಿಸುವ ಹೇಳಿಕೆ, ದೃಶ್ಯ ಅಥವಾ ಕೋಮುವಾದಿ ಭಾವನೆಗಳನ್ನು ಉತ್ತೇಜಿಸುವುದು, ಯಾವುದೇ ಅಸಹ್ಯಕರ, ಮಾನನಷ್ಟ ಮಾಡುವಂತಹ ಉದ್ದೇಶಪೂರ್ವಕ ಹೇಳಿಕೆ, ಸುಳ್ಳು, ಸೂಚನಾತ್ಮಕ ವ್ಯಂಗ್ಯೋಕ್ತಿ, ಅರ್ಧ ಸತ್ಯ, ಹಿಂಸೆಯನ್ನು ಉತ್ತೇಜಿಸುವ, ಪ್ರಚೋದಿಸುವ, ಕಾನೂನು ಮತ್ತು ಶಿಸ್ತುಪಾಲನೆ ಕೆಣಕುವುದು, ರಾಷ್ಟ್ರ ವಿರೋಧಿ ಭಾವನೆಯನ್ನು ಉತ್ತೇಜಿಸುವುದು ಅಥವಾ ನ್ಯಾಯಾಲಯ ನಿಂದನೆಗೆ ಕಾರಣವಾಗುವಂತಹ ಅಂಶಗಳು ಕಂಡು ಬಂದರೆ ಅದರ ವಿರುದ್ಧ ಯಾರಾದರೂ ಈ ದೂರು ಕೋಶ ನಿಯಂತ್ರಣ ಕೊಠಡಿಗೆ ದೂರು ಸಲ್ಲಿಸಬಹುದು.

ಕಾಯ್ದೆಯ ಪರಿಚ್ಛೇದ 7ರಂತೆ ಜಾಹೀರಾತು ಸಂಹಿತೆಗೆ ಸಂಬಂಧಿಸಿದಂತೆ ಕೇಬಲ್ ಸೇವೆಯಲ್ಲಿ ಪ್ರಸಾರವಾಗುವ ಜಾಹೀರಾತುಗಳು ದೇಶದ ಕಾನೂನುಗಳಿಗೆ ಪೂರಕವಾಗಿರಬೇಕು ಮತ್ತು ಚಂದಾದಾರರ ನೈತಿಕತೆ ಮತ್ತು ಸಭ್ಯತೆ, ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡಬಾರದು. ಯಾವುದೇ ಮತ, ಜಾತಿ, ವರ್ಣ, ಕೋಮು ಮತ್ತು ರಾಷ್ಟ್ರೀಯತೆಯನ್ನು ಅವಹೇಳನ ಮಾಡಬಾರದು. ಭಾರತ ಸಂವಿಧಾನದ ಯಾವುದೇ ಉಪಬಂಧದ ವಿರುದ್ಧ ಇರಬಾರದು. ಜನರನ್ನು ಅಪರಾಧಕ್ಕೆ ಪ್ರಚೋದಿಸುವುದಾಗಲಿ, ಅಶಾಂತಿ ಅಥವಾ ಹಿಂಸೆಗೆ ಯಾವುದೇ ರೀತಿಯ ಅಶ್ಲೀಲತೆಗೆ ಕಾರಣವಾಗುವುದಕ್ಕೆ ಅವಕಾಶ ಉಂಟಾಗಬಾರದು.

ಅಪರಾಧೀಕರಣ ಬಯಸುವಂತೆ ಬಿಂಬಿಸ‌ಬಾರದು ಹಾಗೂ ರಾಷ್ಟ್ರೀಯ ಲಾಂಛನ, ಸಂವಿಧಾನದ ಯಾವುದೇ ಭಾಗ ಅಥವಾ ವ್ಯಕ್ತಿ, ರಾಷ್ಟ್ರೀಯ ನಾಯಕರ ವ್ಯಕ್ತಿತ್ವ ಅಥವಾ ರಾಷ್ಟ್ರದ ಗಣ್ಯರ ಶೋಷಣೆಯಾಗಬಾರದು. ಇವುಗಳನ್ನು ಉಲ್ಲಂಘಿಸಿದ್ದು ಕಂಡು ಬಂದಲ್ಲಿ ಸಾರ್ವಜನಿಕರು ದೂರುಗಳನ್ನು ಸಂಬಂಧಿಸಿದ ಜಿಲ್ಲಾ ನಿರ್ವಹಣಾ ಸಮಿತಿಗೆ ಅಥವಾ ರಾಜ್ಯ ನಿರ್ವಹಣಾ ಸಮಿತಿಗೆ ಸಲ್ಲಿಸಬಹುದು.

ಕೇಬಲ್ ಟಿವಿ ಹಾಗೂ ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳಲ್ಲಿ ಯಾವುದೇ ಆಕ್ಷೇಪಗಳು ಕಂಡುಬಂದಲ್ಲಿ, ಜಿಲ್ಲಾ ನಿರ್ವಹಣಾ ಸಮಿತಿ, ಉಪ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, 2ನೇ ಮಹಡಿ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು 560001, ಇಲ್ಲಿ ತೆರೆಯಲಾಗಿರುವ ದೂರುಕೋಶಕ್ಕೆ ಅಥವಾ ಸಹಾಯವಾಣಿ 080 22028012 ಅಥವಾ ಮೊ.ಸಂ 94808 41249 ಗೆ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT