ಸೋಮವಾರ, ಸೆಪ್ಟೆಂಬರ್ 21, 2020
26 °C

ಗರಿಗೆದರಿದ ನಗರಸಭೆ ಚುನಾವಣಾ ಚಟುವಟಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ರಾಜ್ಯಪತ್ರದಲ್ಲಿ ಜುಲೈ 30 2018ರಂದು ಪ್ರಕಟಿಸಲಾಗಿದ್ದ ನಗರಸಭೆ ವಾರ್ಡ್‌ಗಳ ಮೀಸಲಾತಿ ಪಟ್ಟಿಯಂತೆಯೇ ಚುನಾವಣೆ ನಡೆಸಲು ಹೈಕೋರ್ಟ್‌ ಆದೇಶ ನೀಡುತಿದ್ದಂತೆ ನಗರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

‘16ನೇ ವಾರ್ಡ್‌ ಅನ್ನು ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿದೆ. ಆದರೆ ನಿಯಮದ ಪ್ರಕಾರ ಸಾಮಾನ್ಯ ಅಭ್ಯರ್ಥಿಗೆ ಮೀಸಲಿಡಬೇಕು’ ಎಂದು ನಗರದ ಕುಚ್ಚಪ್ಪನಪೇಟೆ ನಿವಾಸಿ ರವಿಕುಮಾರ್‌ ಎಂಬುವವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇದರಿಂದಾಗಿ ನಗರಸಭೆ ಆಡಳಿತ ಅವಧಿ ಮುಕ್ತಾಯವಾಗಿದ್ದರೂ ಚುನಾವಣೆ ನಡೆಸಿರಲಿಲ್ಲ. ಹೈಕೋರ್ಟ್‌ ಈ ಹಿಂದೆ ಪ್ರಕಟಿಸಿರುವ ಮೀಸಲಾತಿ ಪಟ್ಟಿಯಂತೆಯೇ ಚುನಾವಣೆ ನಡೆಸಲು ಸೂಚಿಸಿರುವುದರಿಂದ ರಾಜ್ಯ ಚುನಾವಣಾ ಆಯೋಗ ಯಾವುದೇ ಸಂದರ್ಭದಲ್ಲಾದರೂ ನಗರಸಭೆ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.

ಹೈಕೋರ್ಟ್‌ ನೀಡಿರುವ ತೀರ್ಪು ಸಮಾಧಾನಕರವಾಗಿಲ್ಲ. ಹೀಗಾಗಿ ಮತ್ತೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ರವಿಕುಮಾರ್‌ ತಿಳಿಸಿದ್ದಾರೆ.

ನಿಟ್ಟುಸಿರು ಬಿಟ್ಟ ಆಕಾಂಕ್ಷಿಗಳು: ಇತ್ತೀಚೆಗಷ್ಟೇ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಬಿಜೆಪಿ ಭರ್ಜರಿ ಜಯಗಳಿಸಿತ್ತು. ಹೀಗಾಗಿ ಈ ಫಲಿತಾಂಶ ನಗರಸಭೆ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎನ್ನುವ ಆತಂಕದಲ್ಲಿದ್ದರು. ಆದರೆ ಫಲಿತಾಂಶದ ನಂತರ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಲೋಕಸಭಾ ಚುನಾವಣಾ ಫಲಿತಾಂಶ ಯಾವುದೇ ಪರಿಣಾಮ ಬೀರದೆ ಕಾಂಗ್ರೆಸ್‌, ಜೆಡಿಎಸ್‌ ಸದಸ್ಯರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಮೇಲುಗೈ ಸಾಧಿಸಿದ್ದಾರೆ. ಇದರಿಂದ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಮೇಲು ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎನ್ನುವ ಆಶಾಭಾವನೆಯಲ್ಲಿ ಆಕಾಂಕ್ಷಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು