ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ’

Last Updated 3 ಸೆಪ್ಟೆಂಬರ್ 2021, 3:47 IST
ಅಕ್ಷರ ಗಾತ್ರ

ಆನೇಕಲ್: ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳು ಹಲವು ತಿಂಗಳುಗಳಿಂದ ಮುಚ್ಚಿದ್ದವು. ಪ್ರಸ್ತುತ ಹಂತ ಹಂತವಾಗಿ ಶಾಲೆಗಳ ಪ್ರಾರಂಭಕ್ಕೆ ಸರ್ಕಾರ ಕ್ರಮಕೈಗೊಂಡಿದೆ. ಹಾಗಾಗಿ, ಸರ್ಕಾರಿ ಶಾಲೆಗಳಲ್ಲಿ ಮೂಲಸೌಲಭ್ಯ ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಸಂಘ ಸಂಸ್ಥೆಗಳು ಸಹಕಾರ ನೀಡಬೇಕು’ ಎಂದು ಹುಸ್ಕೂರು ಮದ್ದೂರಮ್ಮ ದೇವಿ ದೇವಾಲಯದ ಟ್ರಸ್ಟ್‌ನ ಕನ್ವೀನರ್‌ ಪಾಪಣ್ಣ ತಿಳಿಸಿದರು.

ತಾಲ್ಲೂಕಿನ ಹುಸ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗೂಷ್‌ ಕಂಪನಿಯಿಂದ ವಿದ್ಯಾರ್ಥಿಗಳಿಗೆ ನೀಡಲಾದ ವಿವಿಧ ಪರಿಕರ ವಿತರಿಸಿ ಅವರು ಮಾತನಾಡಿದರು.

ಶಾಲೆಯ ಮುಖ್ಯಶಿಕ್ಷಕ ಶ್ರೀನಿವಾಸ್‌ ಮೂರ್ತಿ ಮಾತನಾಡಿ, ಹುಸ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿವಿಧ ಸಂಸ್ಥೆಗಳ ನೆರವು ಪಡೆದು ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಲಾಗಿದೆ. ಭಾಷ್‌ ಪ್ರತಿಷ್ಠಾನ ₹ 1ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಿ ಶಿಕ್ಷಕರ ಸೌಲಭ್ಯ ಒದಗಿಸಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT