ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಸಿಎಂ ಸಿದ್ದರಾಮಯ್ಯ ಕುರಿತು ಸುಳ್ಳು ಸುದ್ದಿ ಪ್ರಕಟ ಆರೋಪ: ಎಫ್‌ಐಆರ್

Published 10 ಏಪ್ರಿಲ್ 2024, 15:18 IST
Last Updated 10 ಏಪ್ರಿಲ್ 2024, 15:18 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಲಾಗಿದೆ’ ಎಂದು ಆರೋಪಿಸಿ, ಕಾಂಗ್ರೆಸ್ ನೀಡಿದ ದೂರು ಆಧರಿಸಿ, ನಗರದ ಪಶ್ಚಿಮ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನ ಪ್ರಭಾಕರ್, ವಸಂತ್ ಗಿಳಿಯಾರ್, ವಿಜಯ್ ಹೆರಗು, ಪಾಂಡು ಮೋದಿಕ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಲ್ಲದೇ ಬಿಎಸ್‌ವೈ ಬೆಂಬಲಿಗರು, ದಾವಣಗೆರೆ ಬಿಜೆಪಿ ಹಾಗೂ ದಾತ್ರಿ ಗೋಶಾಲೆ ಗೋಳೂರು ಎಂಬ ಫೇಸ್‌ಬುಕ್‌ ಪುಟಗಳ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

‘ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಮರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ರೀತಿಯಲ್ಲಿ ಸುಳ್ಳು ಸುದ್ದಿಯನ್ನು ಸೃಷ್ಟಿಸಿ, ದಿನಪತ್ರಿಕೆಯಲ್ಲಿ ಪ್ರಕಟವಾದಂತೆ ಪೋಸ್ಟ್ ಮಾಡಲಾಗಿದೆ’ ಎಂದು ಆರೋ‍ಪಿಸಿ ಹರೀಶ್‌ ನಾಗರಾಜ ಎಂಬವರು ದೂರು ನೀಡಿದ್ದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈ ಬಗ್ಗೆ ದೂರು ನೀಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಯಾರು ಪೋಸ್ಟ್‌ ಮಾಡಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT