ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿರುಗಾಳಿ ಸಹಿತ ಮಳೆಗೆ ಉರುಳಿಬಿದ್ದ ಮರಗಳು

Last Updated 23 ಮೇ 2019, 13:31 IST
ಅಕ್ಷರ ಗಾತ್ರ

ವಿಜಯಪುರ: ತೀವ್ರ ಬರಗಾಲದಿಂದ ಕಂಗೆಟ್ಟಿರುವ ಇಳೆಗೆ ಗುರುವಾರ ಸುರಿದ ಮಳೆ ತಂಪೆರೆದಿದೆ. ಬಿರುಗಾಳಿ ಸಮೇತವಾಗಿ ಸುರಿದ ಮಳೆಗೆ ಚನ್ನರಾಯಪಟ್ಟಣ ರಸ್ತೆಯಲ್ಲಿ ಮೂರು ಮರಗಳು ಮುರಿದು ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆ ಆಗಿದೆ.

ಇಲ್ಲಿನ ಪುರಸಭೆ ಪಕ್ಕದಲ್ಲಿರುವ ಜಿ.ಕೆ.ಬಿ.ಎಂ.ಎಸ್ ಶಾಲೆ ಮುಂಭಾಗದಲ್ಲಿ ಮರದ ಕೊಂಬೆಗಳು ಮುರಿದು ಬಿದ್ದಿವೆ.

ವೆಂಕಟಗಿರಿಕೋಟೆಯಲ್ಲಿ ಮಳೆ ನೀರು ಚರಂಡಿಗಳಲ್ಲಿ ಹರಿಯದೆ ರಸ್ತೆಯಲ್ಲಿ ಹರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ‌ವೆಂಕಟೇನಹಳ್ಳಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದು ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ. ಹರಳೂರು ನಾಗೇನಹಳ್ಳಿಯಲ್ಲಿ ರೇಷ್ಮೆ ಚಂದ್ರಿಕೆ ಶೆಡ್‌ನ ಶೀಟ್‌ಗಳು ಗಾಳಿಗೆ ಹಾರಿಹೋಗಿವೆ. ಮನೆ ಹೆಂಚು, ಮೇಲ್ಚಾವಣಿ ಗಾಳಿಗೆ ಹಾರಿ ಹೋಗಿವೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಕಲ್ಯಾಣ್‌ಕುಮಾರ್‌ ಬಾಬು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT