ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ರೈತರ ಧರಣಿ ಅಬಾಧಿತ

Last Updated 22 ಅಕ್ಟೋಬರ್ 2020, 4:05 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಬೆಂಬಲ ಬೆಲೆ ಯೋಜನೆಯಡಿ ಜೋಳ, ರಾಗಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ತಾಲ್ಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘದ ಕಾರ್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ನಿಂತರ ಧರಣಿ ಎರಡನೇ ದಿನವು ಮುಂದುವರಿಯಿತು,

ಸಂಜೆ ಧರಣಿ ನಿರತರೊಂದಿಗೆ ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್‌, ತಹಶೀಲ್ದಾರ್‌ ಟಿ.ಎಸ್‌. ಶಿವರಾಜ್‌ ಮಾತುಕತೆ ನಡೆಸಿದರು.

ರೈತರ ಬೇಡಿಕೆಗಳ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಧರಣಿಯನ್ನು ಹಿಂದಕ್ಕೆ ಪಡೆಯುವಂತೆ ಮಾಡಿದ ಮನವಿಗೆ ರೈತರು ಒಪ್ಪದೆ ಧರಣಿಯನ್ನು ಮುಂದುವರಿಸಿದ್ದಾರೆ.

ತಾಲ್ಲೂಕು ಕಚೇರಿ ಆವರಣದಲ್ಲೇ ರೈತರು ಅಡುಗೆ ಮಾಡಿಕೊಂಡು ರಾತ್ರಿಯು ಸಹ ಧರಣಿಯನ್ನುನಡೆಸುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಸತೀಶ್‌, ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ತೆರೆಯುವ ಬಗ್ಗೆ ಜಿಲ್ಲಾಧಿಕಾರಿ ಖಚಿತ ಭರವಸೆ ನೀಡುವವರೆಗೂ ಧರಣಿಯನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದರು.

ಕೂಡಲೇ ಬೆಂಬಲೆ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ತೆರೆಯಬೇಕು. ಇಲ್ಲವಾದರೆ ಅನ್ನದಾತರು ಸಾಕಷ್ಟು ನಷ್ಟ
ಅನುಭವಿಸಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT