ಮಂಗಳವಾರ, ಆಗಸ್ಟ್ 16, 2022
20 °C

ರಾಗಿ ಖರೀದಿ ಕೇಂದ್ರಕ್ಕೆ ಮುಗಿಬಿದ್ದ ರೈತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ದೊಡ್ಡಬಳ್ಳಾಪುರ: ನಗರದ ಎಪಿಎಂಸಿ ಆವರಣದ ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಲು ರೈತರು ನೂರಾರು ಸಂಖ್ಯೆಯಲ್ಲಿ ಸೇರಿದ್ದರಿಂದ ಬಾರಿ ನೂಕುನುಗ್ಗಲು ಉಂಟಾಗಿದೆ.

ಎರಡನೇ ಬಾರಿಗೆ ರಾಗಿ ಖರೀದಿಗೆ ನೋಂದಣಿ ಸೋಮವಾರದಿಂದ ಆರಂಭವಾಗಿದೆ.

ನೋಂದಣಿ ಮತ್ತೆ ಸ್ಥಗಿತವಾಗಬಹುದು ಎನ್ನುವ ಆತಂಕದಿಂದ ರೈತರು ಮುಗಿಬಿದ್ದಿದ್ದು ನೂಕುನುಗ್ಗಲು ನಿಯಂತ್ರಿಸಲು ಪೊಲೀಸರು ಸಾಹಸ ಪಡುತ್ತಿದ್ದಾರೆ.

ರಾಗಿ ಖರೀದಿ ಕೇಂದ್ರಕ್ಕೆ ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್ ಮೋಹನ ಕುಮಾರಿ ಭೇಟಿ ನೀಡಿ, ನೂಕು ನುಗ್ಗಲು ಉಂಟಾಗದಂತೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು