ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಲಿಬೆಲೆ: ಫಸಲ್ ಭೀಮಾ ಯೋಜನೆ, ಜುಲೈ 15 ಕೊನೆ ದಿನ

Last Updated 24 ಜೂನ್ 2020, 13:15 IST
ಅಕ್ಷರ ಗಾತ್ರ

ಸೂಲಿಬೆಲೆ: 2020-21ನೇ ಸಾಲಿನಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಮುಂಗಾರು ಹಂಗಾಮಿಗೆ ತಾಲ್ಲೂಕಿನಲ್ಲಿ ಬೆಳೆಯಲಾಗುವ ಬೆಳೆಗಳಿಗೆ ವಿಮೆ ಮಾಡಿಸಲು ಜುಲೈ 15 ಕೊನೆಯ ದಿನವಾಗಿದ್ದು, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೊಂದಾಯಿಸಿಕೊಳ್ಳಬೇಕು ಎಂದು ತಾಲ್ಲೂಕು ತೋಟಗಾರಿಕೆ ನಿರ್ದೇಶಕ ಆರ್.ಪ್ರಶಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ₹ 1,18,000 ಆಗಿದೆ. ರೈತರು ಪಾವತಿಸಬೇಕಾಗಿರುವ ವಿಮಾ ಕಂತು ಶೇ 5 ರಂತೆ ₹ 5,900 ಆಗಿದೆ.ವಿಮೆ ಮಾಡಿಸಲು ಆಸಕ್ತಿಯುಳ್ಳ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ಜೆರಾಕ್ಸ್ಮತ್ತು ಸ್ವಯಂ ಘೋಷಿತ ಬೆಳೆ ವಿವರ ಲಗತ್ತಿಸಿ ತಾಲ್ಲೂಕಿನಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ನೋಂದಾಯಿಸಬಹುದಾಗಿದೆ.

ಟೊಮೆಟೊ ಬೆಳೆ ಸಾಲ ಪಡೆದಿರುವ ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಲು ಜುಲೈ 8 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗೆ ಮೊ.95389 53949, ಮೊ.94834 78162 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT