ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಫಾಸ್ಟ್‌ಫುಡ್‌: ಪ್ಲಾಸ್ಟಿಕ್‌ ಬಳಸದಂತೆ ಎಚ್ಚರಿಕೆ

ಬೀದಿಬದಿ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ
Published 30 ಮಾರ್ಚ್ 2024, 5:38 IST
Last Updated 30 ಮಾರ್ಚ್ 2024, 5:38 IST
ಅಕ್ಷರ ಗಾತ್ರ

ವಿಜಯಪುರ: ಪಟ್ಟಣದ ಫುಟ್‌ಪಾತ್ ಹೋಟೆಲ್‌ಗಳ ಮೇಲೆ ಗುರುವಾರ ರಾತ್ರಿ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ, ‌ಅಡುಗೆಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದರು.

ಪುರಸಭೆ ಮುಖ್ಯಾಧಿಕಾರಿ ಸಂತೋಷ್ ಕುಮಾರ್ ನೇತೃತ್ವ ತಂಡ ರಸ್ತೆ ಬದಿ ಮಳಿಗೆಗಳಲ್ಲಿ ಆಹಾರ ತಯಾರಿಕೆ ಕ್ರಮ, ಸ್ವಚ್ಛತೆಯನ್ನು ಪರಿಶೀಲನೆ ನಡೆಸಿದರು.

ಪುರಸಭೆ ಮುಖ್ಯಾಧಿಕಾರಿ ಸಂತೋಷ್ ಕುಮಾರ್ ಮಾತನಾಡಿ, ಈಗಾಗಲೇ ಪುರಸಭೆಯಿಂದ ದಿನಸಿ ಅಂಗಡಿ, ತರಕಾರಿ ಅಂಗಡಿ ಹಾಗೂ ಹೋಟಲ್‌ಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸದಂತೆ ಸೂಚಿಸಲಾಗಿದೆ. ಫಾಸ್ಟ್‌ಫುಡ್‌, ಕಲ್ಯಾಣ ಮಂಟಪಗಳ ಮೇಲೂ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಸದಂತೆ ನಿರ್ದೇಶಿಸಲಾಗಿದೆ. ಪ್ಲಾಸ್ಟಿಕ್ ಬಳಕೆ ಮಾಡಿದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT