ಆನೇಕಲ್: ಪಟ್ಟಣದ ಬನ್ನೇರುಘಟ್ಟ ರಸ್ತೆಯ ಶನೈಶ್ಚರಸ್ವಾಮಿ ದೇವಾಲಯದ ಚಾರಿಟಬಲ್ ಟ್ರಸ್ಟ್ನಿಂದ ಮಹಾಶಿವರಾತ್ರಿ ಅಂಗವಾಗಿ ಶನಿ ದೇವರ ಉತ್ಸವ ಮೂರ್ತಿಯ ಹೂವಿನ ಪಲ್ಲಕ್ಕಿ ಉತ್ಸವ ಮತ್ತು ಭವಾನಿ ಚಂದ್ರಶೇಖರ ಸ್ವಾಮಿ ಮತ್ತು ರಾಘವೇಂದ್ರ ಸ್ವಾಮಿಗಳ ಬೆಳ್ಳಿರಥದ ಉತ್ಸವವು ಪಟ್ಟಣದಲ್ಲಿ ಶುಕ್ರವಾರ ನಡೆಯಿತು.

ವಿವಿಧ ಜನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಉತ್ಸವದಲ್ಲಿ ಪಾಲ್ಗೊಂಡು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ವೀರಗಾಸೆ, ಚಂಡೆ ಸೇರಿದಂತೆ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

ಶಿವರಾತ್ರಿ ಪ್ರಯುಕ್ತ ಫೆ. 18ರಂದು ಸ್ವಾಮಿಗೆ ವಿಶೇಷ ಪೂಜೆ ನಡೆಯಲಿದೆ. ರಾತ್ರಿ ಶನಿದೇವರ ಪ್ರಭಾವ ಪೌರಾಣಿಕ ನಾಟಕ ಹಮ್ಮಿಕೊಳ್ಳಲಾಗಿದೆ.

ಆನೆ ಅಂಬಾರಿ ಉತ್ಸವ: ತಾಲ್ಲೂಕಿನ ಯಡವನಹಳ್ಳಿಯ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಹದೇಶ್ವರ ಸ್ವಾಮಿ ಚಾರಿಟಬಲ್ ಟ್ರಸ್ಟ್ ಮತ್ತು ವೀರಶೈವ ಲಿಂಗಾಯತ ಮಹಾಸಭಾದಿಂದ ಮಹಾಶಿವರಾತ್ರಿ ಪ್ರಯುಕ್ತ ಆನೆ ಅಂಬಾರಿ ಉತ್ಸವವು ಫೆ. 18ರಂದು ನಡೆಯಲಿದೆ.

ಉತ್ಸವದ ಪ್ರಯುಕ್ತ ವೀರಗಾಸೆ, ಡೊಳ್ಳುಕುಣಿತ, ಪೂಜಾ ಕುಣಿತ ಸೇರಿದಂತೆ ವಿವಿಧ ಜನಪದ ಕಲಾತಂಡಗಳ ಮೆರವಣಿಗೆ ನಡೆಯಲಿದೆ. ಕೋಲಾಟ, ನೈದಿಲಿ ನಾಟ್ಯಾಲಯದಿಂದ ನೃತ್ಯ ಪ್ರದರ್ಶನ, ಹರಿಕಥೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ತಾಲ್ಲೂಕಿನ ತಿಮ್ಮಸಂದ್ರ ಗೇಟ್ನ ಎ ಎನ್ ಫೌಂಡೇಷನ್ನಿಂದ ಶಿವರಾತ್ರಿ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ, ದ್ವಾದಶ ಲಿಂಗಗಳಿಗೆ ಅಭಿಷೇಕ, ಅಲಂಕಾರ, ಭರತನಾಟ್ಯ ಮತ್ತು ಕಂಸಾಳೆ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ಫೌಂಡೇಷನ್ನ ಕೆ.ಆರ್. ಸೋಮಶೇಖರ್ ತಿಳಿಸಿದ್ದಾರೆ.

ಜಗಜ್ಯೋತಿ ಬಸವೇಶ್ವರ ನಾಟಕ ಪ್ರದರ್ಶನ: ತಾಲ್ಲೂಕಿನ ಹಾರಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದ್ಯಾವಸಂದ್ರದ ಭಕ್ತಿ ಮುನೇಶ್ವರ ಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿದೆ.

ರಾಜಾಪುರ ಮಠದ ಡಾ.ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ. ಸಂಜೆ ವೀರಗಾಸೆ ಪ್ರದರ್ಶನ ಮತ್ತು ರಾತ್ರಿ 8ಗಂಟೆಗೆ ಜಗಜ್ಯೋತಿ ಬಸವೇಶ್ವರ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ
ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.