ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿ ಅವಘಡ: ಹಸು, ರೈತನಿಗೆ ಗಾಯ

Published 16 ಮಾರ್ಚ್ 2024, 2:57 IST
Last Updated 16 ಮಾರ್ಚ್ 2024, 2:57 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಹಸು ಕಟ್ಟುವ ಕೊಟ್ಟಿಗೆಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎರಡು ಹಸು ಸೇರಿ ರೈತ ಕೂಡ ಗಾಯಗೊಂಡಿರುವ ಪ್ರಕರಣ ತಾಲ್ಲೂಕಿನ ಹಾಡೋ‌ನಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ರೈತ ರಾಜಣ್ಣ ಅವರು ಕೊಟ್ಟಿಗೆಯಲ್ಲಿ ಹಸುಗಳನ್ನು ಕಟ್ಟಿ ಮಲಗಿದ್ದ ಸಮಯದಲ್ಲಿ ಗುರುವಾರ ರಾತ್ರಿ ಒಂದು ಗಂಟೆ ಸುಮಾರಿನಲ್ಲಿ ಅಪರಿಚಿತರು ಕೊಟ್ಟಿಗೆಯ ಸುತ್ತಲು ಹೊದಿಸಲಾಗಿದ್ದ ಹುಲ್ಲಿಗೆ ಬೆಂಕಿ ಹಚ್ಚಿದ್ದಾರೆ. ಕೊಟ್ಟಿಗೆಗೆ ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ರಾಜಣ್ಣ ಅವರಿಗೆ ತಿಳಿಸಿದ್ದು, ಘಟನೆಯಲ್ಲಿ ಎರಡು ಹಸುಗಳು ಗಂಭೀರವಾಗಿ ಗಾಯಗೊಂಡಿದ್ದರೆ, ಹಸುವನ್ನು ಕಾಪಾಡಲು ಮುಂದಾದ ರಾಜಣ್ಣ ಹಾಗೂ ಅವರ ಮಗಳಿಗೆ ಸುಟ್ಟ ಗಾಯಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT