ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿ ಅವಘಡ: ಹೊತ್ತಿ ಉರಿದ ಗೋದಾಮು– ಲಕ್ಷಾಂತರ ನಷ್ಟ

Last Updated 15 ಮಾರ್ಚ್ 2023, 5:00 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಪಾಲನಜೋಗಿಹಳ್ಳಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿಗೆ ಮಂಗಳವಾರ ಸಂಜೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.

ರೋಜಿಪುರದ ನವೀನ್ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ಗೋದಾಮು ಇದಾಗಿದೆ. ಸಮೀಪದ ಜಮೀನಿನಲ್ಲಿ ಬೆಳೆದಿದ್ದ ಹುಲ್ಲಿಗೆ ತಗುಲಿದ ಬೆಂಕಿ ಗೋದಾಮಿಗೂ ವ್ಯಾಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ನಂದಿಸಿದ್ದಾರೆ. ಗೋದಾಮಿನಲ್ಲಿ ಸಂಗ್ರಹ ಮಾಡಿದ್ದ ಎರಡು ಸಾವಿರ ಪ್ಲಾಸ್ಟಿಕ್ ಡ್ರಮ್‌ಗಳು, ಒಂದೂವರೆ ಸಾವಿರ ಪ್ಲಾಸ್ಟಿಕ್ ಕ್ರೇಟ್, ಅಕ್ರಾಲಿಕ್ ಶೀಟ್ ಸೇರಿದಂತೆ ಸುಮಾರು ₹15 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳು ಭಸ್ಮವಾಗಿವೆ ಎಂದು ಮಾಲೀಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT