‘ಟಫೆ’ ಟ್ರ್ಯಾಕ್ಟರ್ ಟೈರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

ಸೋಮವಾರ, ಮೇ 27, 2019
33 °C
ಬೆಂಗಳೂರು-ದೊಡ್ಡಬಳ್ಳಾಪುರ ರಸ್ತೆಯಲ್ಲಿ ಘಟನೆ

‘ಟಫೆ’ ಟ್ರ್ಯಾಕ್ಟರ್ ಟೈರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Published:
Updated:

ದೊಡ್ಡಬಳ್ಳಾಪುರ: ಬೆಂಗಳೂರು-ದೊಡ್ಡಬಳ್ಳಾಪುರ ರಸ್ತೆಯ ‘ಟಫೆ’ ಟ್ರ್ಯಾಕ್ಟರ್ ಟೈರ್ ಗೋದಾಮಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಟೈರ್‌ಗಳು ಸುಟ್ಟು ಕರಕಲಾಗಿವೆ.

ಬೆಂಕಿ ಅವಗಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದಿಲ್ಲ. ಅಗ್ನಿಶಾಮಕ ದಳದ ಮೂರು ವಾಹನಗಳ ಸಹಾಯದಿಂದ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ಬೆಂಕಿ ಅವಘಡ ಸಂಭವಿಸಿರುವ ಸ್ಥಳದ ಸುತ್ತ ವಸತಿ ಹಾಗೂ ಕೈಗಾರಿಕಾ ಪ್ರದೇಶವಿದೆ. ದಟ್ಟವಾದ ಹೊಗೆ ಅವರಿಸಿಕೊಂಡಿದ್ದು ಜನರ ಉಸಿರಾಟಕ್ಕೂ ತೊಂದರೆಯಾಗಿದೆ.

ಬೆಂಕಿ ಹೊತ್ತಿಕೊಂಡ ಪ್ರದೇಶದ ಸಮೀಪದಲ್ಲೇ ಪೆಟ್ರೋಲ್ ಬಂಕ್ ಹಾಗೂ ‘ಟಫೆ’ ಕಂಪನಿಯ ಮಾರಾಟಕ್ಕೆ ಸಿದ್ದವಾಗಿರುವ ಸಾವಿರಾರು ಟ್ರ್ಯಾಕ್ಟರ್‌ಗಳೂ ಇವೆ. ಬೆಂಕಿ ಇತರೆಡೆಗೆ ಹರಡದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಿದ್ದಾರೆ. ಸದ್ಯ ಅಗ್ನಿಶಾಮಕ ದಳದ ಮೂರು ವಾಹನಗಳು ಸ್ಥಳದಲ್ಲಿವೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 2

  Sad
 • 0

  Frustrated
 • 0

  Angry

Comments:

0 comments

Write the first review for this !