ದೊಡ್ಡಬಳ್ಳಾಪುರ: ನಗರದ ಮುತ್ತೂರಿನಲ್ಲಿ ಶುಕ್ರವಾರ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಪಟಾಕಿ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಯೋಗೇಶ್ (15) ಮಂಗಳವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಇದರೊಂದಿಗೆ ಪಟಾಕಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏರಡಕ್ಕೇರಿದೆ. ಗಣೇಶ ವಿಸರ್ಜನೆ ವೇಳೆ ನಡೆದ ಪಟಾಕಿ ಸ್ಫೋಟದಲ್ಲಿ ಧನುಷ್ ರಾವ್ (15) ಮೃತಪಟ್ಟಿದ್ದ.

ಪೊಲೀಸ್ ಹೆಡ್ ಕಾನ್ಸ್ಟೇಬಲ್ ಜಾಕೀರ್ ಹುಸೇನ್, ಪವರ್ ಲಿಫ್ಟ್ ವಾಹನ ಆಪರೇಟರ್ ಮುನಿರಾಜು, ಸ್ಥಳೀಯ ನಿವಾಸಿಗಳಾದ ಚೇತನ್, ಗಣೇಶ್, ಲೋಕೇಶ್, ಮುನಿಅಕ್ಕಯ್ಯಮ್ಮ, ಧನಂಜಯ ಸೇರಿ ಒಂಬತ್ತು ಜನ ಗಂಭೀರವಾಗಿ ಗಾಯಗೊಂಡಿದ್ದರು. ಎಲ್ಲರೂ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಣೇಶ ವಿಸರ್ಜನೆ ಆಯೋಜಿಸಿದ್ದ ಮೂವರನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.