ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಭೂ ದಾಖಲೆಗಳ ಗೊಂದಲ ಸರಿಪಡಿಸಿ

ವೇದಾವತಿ ಅಮಾನತುಗೊಳಿಸಲು ಸ್ಥಾಯಿ ಸಮಿತಿ ಅಧ್ಯಕ್ಷರ ಪಟ್ಟು
Last Updated 13 ಜನವರಿ 2020, 13:48 IST
ಅಕ್ಷರ ಗಾತ್ರ

ದೇವನಹಳ್ಳಿ: ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ವೇದಾವತಿ ಅವರನ್ನು ಕೂಡಲೇ ಅಮಾನತುಗೊಳಿಸಿ ಎಂದು ವಿವಿಧ ಸ್ಥಾಯಿ ಅಧ್ಯಕ್ಷರು ಪಟ್ಟು ಹಿಡಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ದಾಸೋಹ ಅಧಿಕಾರಿ ವೇದಾವತಿ ಅವರನ್ನು ಅಮಾನತು ಮಾಡದಿದ್ದರೆ ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ ಮಾತನಾಡಿ, ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದೆಂದು ಹೇಳಿದರು. ಮಧ್ಯ ಪ್ರವೇಶಿಸಿ ಮಾತನಾಡಿದ ಜಿ.ಪಂ ಅಧ್ಯಕ್ಷೆ ಜಯಮ್ಮ , ಉಪಾಧ್ಯಕ್ಷ ಕನ್ಯಾಕುಮಾರಿ, ಉದ್ಧಟತನ ಮಾಡುವ ಅಧಿಕಾರಿಗಳ ಅವಶ್ಯ ಬೇಕಿಲ್ಲ ಎಂದು ಒಕ್ಕೊರಲಿನಿಂದ ವಿರೋಧಿಸಿದರು.

ನಂತರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಶಿಕ್ಷಣ ಇಲಾಖೆ ಆಯುಕ್ತರಿಗೆ ಅಮಾನತಿಗೆ ಶಿಫಾರಸು ಮಾಡಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಹೆಚ್ಚಿಸಲು ಕೈಗೊಂಡಿರುವ ಕ್ರಮದ ಬಗ್ಗೆ ಉಪ ನಿರ್ದೇಶಕರನ್ನು ಪ್ರಶ್ನಿಸಿದರು.ಇದಕ್ಕೆ ಉತ್ತರಿಸಿದ ಉಪನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲೆಯಲ್ಲಿ ವಿವಿಧ ವಿಷಯದಲ್ಲಿ ಹಿಂದುಳಿದ 2902 ಮಕ್ಕಳನ್ನು ಗುರುತಿಸಿ ವೇಳಾ ಪಟ್ಟಿ ತಯಾರಿಸಿ ನಿತ್ಯ 9ರಿಂದ 10ರವರೆಗೆ ವಿಶೇಷ ಬೋಧನೆ ನಡೆಸಲಾಗುತ್ತಿದೆ. ಖಾಸಗಿ ಮತ್ತು ಸರ್ಕಾರಿ ಶಾಲೆ ಮುಖ್ಯ ಶಿಕ್ಷಕರ ಸಭೆ ನಡೆಸಲಾಗಿದೆ. ಪರೀಕ್ಷಾ ಬೋಧನಾ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ ಎಂದು ಸಭೆ ಗಮನಕ್ಕೆ ತಂದರು.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್ ಮಾತನಾಡಿ, ಬೀರಸಂದ್ರ ಗ್ರಾಮದಲ್ಲಿ ಸ್ಥಳೀಯರಿಗೆ ಕುಡಿಯುವ ನೀರಿನ ಕೊರತೆ ಇದೆ. ಅಲೂರು ದುದ್ಧನಹಳ್ಳಿ ಗ್ರಾಮದಲ್ಲಿ ಒಂದು ತಿಂಗಳಲ್ಲಿ 12 ಜನರು ಅಕಾಲಿಕವಾಗಿ ಮರಣ ಹೊಂದಿದ್ದಾರೆ. ಸತ್ತವರಿಗೆ ಮುಖವೆಲ್ಲ ಕಪ್ಪಗಾಗಿರುತ್ತದೆ. ಇದರ ಬಗ್ಗೆ ಆರೋಗ್ಯಾಧಿಕಾರಿ ತನಿಖೆ ನಡೆಸಿ ವರದಿ ನೀಡಿ ಎಂದು ತಾಕೀತು ಮಾಡಿದರು. ವಿಶ್ವಾನಾಥಪುರ ಸರ್ಕಾರಿ ಶಾಲೆ ಬಳಿ ಜಾಗವಿದೆ. ಕ್ರೀಡಾ ವಸತಿ ನಿಲಯ ಆರಂಭಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ವಿನೂತರಾಣಿ, ಉಪಕಾರ್ಯದರ್ಶಿ ಕರಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT