ಮಂಗಳವಾರ, ಜನವರಿ 26, 2021
16 °C

ಸಿದ್ದರಾಜುಗೆ ಜಾನಪದ ಅಕಾಡೆಮಿ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ಆನೇಕಲ್: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ನೀಡಲಾಗುವ ಜಾನಪದ ಅಕಾಡೆಮಿ ಪ್ರಶಸ್ತಿಗೆ ತಾಲ್ಲೂಕಿನ ಚಂದಾಪುರದ ನಿವೃತ್ತ ಶಿಕ್ಷಕ ಎಂ.ಕೆ.ಸಿದ್ದರಾಜು ಆಯ್ಕೆಯಾಗಿದ್ದಾರೆ.

2020ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ಎಂ.ಕೆ.ಸಿದ್ದರಾಜು, ವೃತ್ತಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಗಾಯನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಮೂಲಜನಪದ ಸಂಗೀತದ ಜತೆಗೆ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಹಾರ್ಮೋನಿಯಂ ಮತ್ತು ಕೀ-ಬೋರ್ಡ್‌ ವಾದನದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ನೂರಕ್ಕೂ ಹೆಚ್ಚು ಜಾನಪದ ಗೀತ ಗಾಯನ ಶಿಬಿರಗಳನ್ನು ನಡೆಸಿ ಮೂರು ಸಾವಿರಕ್ಕೂ ಹೆಚ್ಚು ಮಂದಿಗೆ ಜಾನಪದ ಗಾಯನ ತರಬೇತಿ ನೀಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುವ ಡಾ.ಜಗಜೀವನರಾಮ್‌ ರಾಜ್ಯ ಪ್ರಶಸ್ತಿಗೂ ಭಾಜನರಾಗಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.