ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಶಾಕಲದೇವನಪುರದ ಜಾನಪದ ಗಾಯಕ ವಿ.ರಾಮಚಂದ್ರ (58) ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 2ಗಂಟೆಗೆ ಸ್ವಗ್ರಾಮ ಶಾಕಲದೇವನಪುರದಲ್ಲಿ ನಡೆಯಲಿದೆ.

ಡಿ.9 ರಂದು ತಾಲ್ಲೂಕಿನ ನಾಗದೇನಹಳ್ಳಿ ಬಳಿ ವಿ.ರಾಮಚಂದ್ರ ಚಲಾಯಿಸುತ್ತಿದ್ದ ಕಾರು ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು, ತೀವ್ರವಾಗಿ ಗಾಯಗೊಂಡಿದ್ದರು. ರಾಮಚಂದ್ರ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಾನಪದ ಗಾಯಕರಾದ ವಿ.ರಾಮಚಂದ್ರ ಅವರು, ದೂರದರ್ಶನ ಸೇರಿದಂತೆ ವಿವಿಧ ವಾಹಿನಿಗಳು ಸೇರಿ, ನೂರಾರು ಕಾರ್ಯಕ್ರಮಗಳನ್ನು ನೀಡಿದ್ದರು. ಜಾನಪದ ಸಾಂಸ್ಕೃತಿಕ ಕಲಾ ಸಂಘದ ಸಂಸ್ಥಾಪಕ ಕಾರ್ಯದರ್ಶಿಯಾಗಿ ಜಾನಪದ ಕಲಾ ಉತ್ಸವ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.