ಗುರುವಾರ , ಜೂಲೈ 9, 2020
21 °C

ದೇವನಹಳ್ಳಿ: ಸರ್ಕಾರ ನಿರ್ಲಕ್ಷ್ಯದಿಂದ ತೊಂದರೆಯಲ್ಲಿ ಅಸಂಘಟಿತ ಕಾರ್ಮಿಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಕಳೆದ 45 ದಿನಗಳಿಂದ ಕೊರೊನಾ ಸೋಂಕು ಭೀತಿಯಿಂದ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ನಿಂದ ಹಲವರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಇವರ ಕಷ್ಟಗಳನ್ನು ಆಲಿಸಿ ಸ್ಪಂದಿಸುವ ಕೆಲಸವನ್ನು ಮಾಡುತ್ತಿಲ್ಲ ಎಂದು ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎನ್.ಸೊಣ್ಣಪ್ಪ ಆರೋಪಿಸಿದ್ದಾರೆ. 

ಇಲ್ಲಿನ ಬೆಟ್ಟೆನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಆಹಾರದ ಕಿಟ್‌ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಇಲಾಖೆ ಅಧಿಕಾರಿಗಳು, ಕೆಲ ದಾನಿಗಳು ವಲಸಿಗ ಕಾರ್ಮಿಕರಿಗೆ ಸ್ಪಂದಿಸಿದ್ದಾರೆ. ಆದರೆ, ಸ್ಥಳೀಯ ಅಸಂಘಟಿತ ಕಾರ್ಮಿಕರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ತಾತ್ಕಾಲಿಕ ಪರಿಹಾರದ ವ್ಯವಸ್ಥೆಯನ್ನಾದರೂ ಮಾಡಬೇಕಿತ್ತು ಎಂದು ಹೇಳಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ವಿಧಾನ ಸಭಾಕ್ಷೇತ್ರದಲ್ಲಿ 35 ಸಾವಿರ ದಿನಸಿ ಕಿಟ್ ವಿತರಿಸಲಾಗಿದೆ ಎಂದು ತಿಳಿಸಿದರು. 

ಜಿಲ್ಲಾ ಜೆಡಿಎಸ್ ಘಟಕ ಅಧ್ಯಕ್ಷ ಬಿ.ಮುನೇಗೌಡ, ಬಮೂಲ್ ನಿರ್ದೇಶಕ ಬಿ.ಶ್ರೀನಿವಾಸ್ ಮಾತನಾಡಿದರು.

ಜೆಡಿಎಸ್ ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಮಹೇಶ್, ಗೋಪಾಲಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ಕುಂದಾಣ ಹೋಬಳಿ ಜೆಡಿಎಸ್ ಘಟಕ ಅಧ್ಯಕ್ಷ ಚಂದ್ರೇಗೌಡ, ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಮುಖಂಡರು ಇದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು