ಭಾನುವಾರ, ಆಗಸ್ಟ್ 1, 2021
20 °C
ನೂರಾರು ಮಂದಿ ವಲಸಿಗರ ಬದುಕಿಗೆ ಸಂಕಷ್ಟ ತಂದೊಡ್ಡಿದ ಕೊರೊನಾ

ದಿನಗೂಲಿ ಕಾರ್ಮಿಕರಿಗೆ ಕಿಟ್‌: ಕೆ.ಎಸ್‌. ನಟರಾಜ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ‘ಸಂಕಷ್ಟದ ಸಮಯದಲ್ಲಿ ಉದ್ಯೋಗಗಳಿಲ್ಲದೇ ನೂರಾರು ಮಂದಿ ವಲಸೆ ಕಾರ್ಮಿಕರು ಹಲವಾರು ಸಮಸ್ಯೆ ಎದುರಿಸಿದ್ದಾರೆ. ಸಂಕಷ್ಟದಲ್ಲಿ ಇರುವವರಿಗೆ ನೆರವು ನೀಡಲು ಹಲವಾರು ಸಂಘ, ಸಂಸ್ಥೆಗಳು, ದಾನಿಗಳು ಮುಂದೆ ಬಂದಿರುವುದು ಶ್ಲಾಘನೀಯ’ ಎಂದು ಹಾರಗದ್ದೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್‌. ನಟರಾಜ್‌ ತಿಳಿಸಿದರು.

ತಾಲ್ಲೂಕಿನ ವಡ್ಡರಪಾಳ್ಯದಲ್ಲಿ ದಿನಗೂಲಿ ಕಾರ್ಮಿಕರಿಗೆ ಆಹಾರದ ಕಿಟ್‌ ವಿತರಿಸಿ ಅವರು ಮಾತನಾಡಿದರು.

ಜಿಗಣಿ ಕೈಗಾರಿಕಾ ಪ್ರದೇಶವಾಗಿದ್ದು ಸಾವಿರಾರು ಮಂದಿಗೆ ಉದ್ಯೋಗ ನೀಡಿದೆ. ಆದರೆ, ಲಾಕ್‌ಡೌನ್‌ನಿಂದಾಗಿ ಉದ್ಯೋಗ ಕಳೆದುಕೊಂಡು ಒಪ್ಪೊತ್ತಿನ ಊಟಕ್ಕೂ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಉಳ್ಳವರು ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವ ಮೂಲಕ ಮಾನವೀಯತೆಯನ್ನು ತೋರಬೇಕಾಗಿದೆ ಎಂದರು.

ಕಂಠೀರವ ನೃತ್ಯ ಸಂಗೀತ ಸಭಾದ ಅಧ್ಯಕ್ಷ ಪಿ. ಧನಂಜಯ ಮಾತನಾಡಿ, ವಡ್ಡರಪಾಳ್ಯದಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿರುವುದರಿಂದ ಸಂಸ್ಥೆಯು ಅವರಿಗೆ ಆಹಾರದ ಕಿಟ್‌ ವಿತರಿಸುವ ಮೂಲಕ ನೆರವಾಗಬೇಕು ಎಂಬ ಉದ್ದೇಶದಿಂದ ಕಿಟ್‌ಗಳನ್ನು ನೀಡಲಾಗಿದೆ. ಇದಕ್ಕೆ ಅತ್ತಿಬೆಲೆ ಸರ್ಕಲ್‌ ಇನ್‌ಸ್ಪೆಕ್ಟರ್ ಕೆ. ವಿಶ್ವನಾಥ್‌ ಅವರು ಸಹಕಾರ ನೀಡಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಸಿ.ಎನ್‌.ಆರ್. ರವಿಚಂದ್ರ, ಸಂಪಂಗಿ, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್‌ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು