ತೀವ್ರ ಮಳೆ ಕೊರತೆ: ವಿಶೇಷ ಪ್ಯಾಕೇಜ್‌ ಘೋಷಣೆಗೆ ಒತ್ತಾಯ

7
ಬರಪೀಡಿತ ಪಟ್ಟಿಗೆ ಸೇರಿಸಲು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ನಿರ್ಧಾರ

ತೀವ್ರ ಮಳೆ ಕೊರತೆ: ವಿಶೇಷ ಪ್ಯಾಕೇಜ್‌ ಘೋಷಣೆಗೆ ಒತ್ತಾಯ

Published:
Updated:
Deccan Herald

ವಿಜಯಪುರ: ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಸಾಕಷ್ಟು ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗುವುದು ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ಇಲ್ಲಿನ ಬಲಜಿಗರ ಬೀದಿಯಲ್ಲಿರುವ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ನಡೆಯಲಿದರುವ ವೈಭವ ಕಲ್ಯಾಣೋತ್ಸವದ ಅಂಗವಾಗಿ ಶುಕ್ರವಾರ ಭೇಟಿ ನೀಡಿ, ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ವಾಡಿಕೆ ಮಳೆ ಪ್ರಮಾಣದಲ್ಲಿ ಶೇ 75ರಷ್ಟು ಕೊರತೆಯಾಗಿದೆ. ಕೃಷಿ ಭೂಮಿಯಲ್ಲಿ ಬಿತ್ತನೆಗೊಂಡಿದ್ದ ಬೀಜಗಳು ಮೊಳಕೆಯೊಡೆಯದೆ ಒಣಗಿ ಹೋಗಿದೆ ಎಂದು ತಿಳಿಸಿದರು.

ಕೆಲವು ಭಾಗದಲ್ಲಿ ಮೊಳಕೆಯೊಡೆದ ಬೀಜಗಳು ನೀರಿನ ಕೊರತೆಯಿಂದ ನಾಶವಾಗಿವೆ. ಇದರ ಫಲವಾಗಿ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ ಎಂದು ಮಾಹಿತಿ ತಿಳಿಸಿದರು.

ಮುಂದಿನ ದಿನದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ. ರಾಸುಗಳ ಮೇವಿಗೂ ಪರದಾಡಬೇಕಾದ ಸಂದಿಗ್ಧ ಸ್ಥಿತಿ ನಿರ್ಮಾಣವಾಗುವ ಮೂನ್ಸೂಚನೆ ಕಂಡು ಬರುತ್ತಿದೆ ಎಂದು ಆಂತಕ ವ್ಯಕ್ತಪಡಿಸಿದರು.

ಈ ಎಲ್ಲ ಕಾರಣದಿಂದ ಬರಗಾಲ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ತಾಲ್ಲೂಕು ಸೇರಿಸಿ ವಿಶೇಷ ಪ್ಯಾಕೇಜ್ ನೀಡಬೇಕೆಂದು ಮನವಿ ಮಾಡುವುದಾಗಿ ತಿಳಿಸಿದರು.

ಪುರಸಭೆ ವ್ಯಾಪ್ತಿಯಲ್ಲಿರುವ ರೈತರಿಗೆ ವಿಮಾ ಸೌಲಭ್ಯದ ಪರಿಹಾರ ಸಿಗುವುದಿಲ್ಲ ಎಂಬುವ ಮಾಹಿತಿ ಪತ್ರಿಕೆಯಲ್ಲಿ ಓದಿ ತಿಳಿದುಕೊಂಡಿದ್ದೇನೆ. ಈ ಬಗ್ಗೆ ಕೃಷಿ ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ ಅವರೊಂದಿಗೆ ಮಾತುಕತೆ ನಡೆಸುವ ಮೂಲಕ ನಗರ ವ್ಯಾಪ್ತಿಯ ರೈತರಿಗೂ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಇಲ್ಲಿನ ಭರತ್ ಎಂಬ ಯುವಕನಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಡಿಯಲ್ಲಿ ₹39,195 ರೂಪಾಯಿ ಚೆಕ್‌ ವಿತರಣೆ ಮಾಡಿದರು.

ದೇವಾಲಯ ಕಮಿಟಿ ವತಿಯಿಂದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರನ್ನು ಅಭಿನಂದಿಸಿದರು. ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಇರಿಗೇನಹಳ್ಳಿ ಶ್ರೀನಿವಾಸ್, ನಗರ ಘಟಕದ ಅಧ್ಯಕ್ಷ ಎಸ್.ಭಾಸ್ಕರ್, ಕಾರ್ಯಾಧ್ಯಕ್ಷ ಎಂ.ಕೇಶವಪ್ಪ, ಪ್ರಧಾನ ಕಾರ್ಯದರ್ಶಿ ಸುಬ್ಬಣ್ಣ, ಪುರಸಭಾ ಸದಸ್ಯ ಬಲಮುರಿ ಶ್ರೀನಿವಾಸ್, ಜೆ.ಆರ್.ಮುನಿವೀರಣ್ಣ, ಶಾಮಣ್ಣ, ಮುನಿರಾಜು, ಆಪ್ತ ಸಹಾಯಕ ಮಂಜುನಾಥ್, ಬಿದಲೂರು ಶಂಕರ್ ದೇವಾಲಯ ಕಮಿಟಿ ಅಧ್ಯಕ್ಷ ಮುನಿಕೃಷ್ಣಪ್ಪ, ಮರವೇ ನಾರಾಯಣಸ್ವಾಮಿ, ಪಿ.ನಾರಾಯಣಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !