ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ

Last Updated 29 ಡಿಸೆಂಬರ್ 2022, 3:04 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ಅಂಚಿನ ಕುರುಬರಹಳ್ಳಿ ಸಮೀಪದ ತಳಗವಾರ ರಸ್ತೆಯಲ್ಲಿ ಚಿರತೆ ಕಂಡು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಭಾಗದಲ್ಲಿ ಮತ್ತೊಮ್ಮೆ ಚಿರತೆ ಕಂಡು ಬಂದಲ್ಲಿ ಬೋನ್ ಅಳವಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಚಿರತೆಗಳು ಒಂದೇ ಸಮಮನೆ ವಲಸೆ ನೆಡೆಸುತ್ತಿರುತ್ತವೆ. ತಾಲ್ಲೂಕಿನ ಆಲೇನಹಳ್ಳಿ, ಚೆನ್ನಾಪುರ, ರಾಷ್ಟ್ರೋತ್ಥಾನ ಗೋಶಾಲೆ ಹಾಗೂ ಸಾಸಲು ಹೋಬಳಿಯ ಎರಡು ಕಡೆ ಸೇರಿ ಒಟ್ಟು ಐದು ಕಡೆಗಳಲ್ಲಿ ಚಿರತೆ ಸೆರೆಗೆ ಬೋನ್ ಅಳವಡಿಸಲಾಗಿದೆ. ಕೊನಘಟ್ಟದ ಬಳಿ ಬೋನ್ ಅಳವಡಿಕೆಗೆ ಕ್ರಮಕೈಗೊಳ್ಳಲಾಗಿದೆ.

ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ರಸ್ತೆ, ಕೊನಘಟ್ಟ ಜಮೀನಿನಲ್ಲಿ ಚಿರತೆಯ ಹೆಜ್ಜೆ ಗುರುತು, ಕೊನಘಟ್ಟ ಯುವಕನ ಮೇಲೆ ದಾಳಿಗೆ ಯತ್ನ,ಇದೀಗ ನಗರಕ್ಕೆ ಹೊಂದಿಕೊಂಡಂತಿರುವ ಕುರುಬರಹಳ್ಳಿ ಬಳಿ ಚಿರತೆ ಕಂಡುಬಂದಿರುವುದು ಆತಂಕ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT