ಮಂಗಳವಾರ, ಅಕ್ಟೋಬರ್ 27, 2020
28 °C

ನರೇಗಾ ಅಡಿ ಅರಣ್ಯೀಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ನರೇಗಾ ಯೋಜನೆಯಡಿ ಸಿಗುವಂತಹ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಗ್ರಾಮಾಂತರ ಪ್ರದೇಶಗಳನ್ನು ಅರಣ್ಯೀಕರಣ ಮಾಡಲು ಮುಂದಾಗುವುದು ಉತ್ತಮ ಬೆಳವಣಿಗೆ’ ಎಂದು ಮುಖಂಡ ಶಾಂತಕುಮಾರ್ ತಿಳಿಸಿದರು.

ಚನ್ನರಾಯಪಟ್ಟಣ ಹೋಬಳಿ ಯಲಿಯೂರು ಗ್ರಾಮದ ಸ್ಮಶಾನದಲ್ಲಿ ನರೇಗಾ ಯೋಜನೆಯಡಿ ಸ್ವಚ್ಛತಾ ಕಾರ್ಯ ಹಾಗೂ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹಳ್ಳಿಗಳು ಸರ್ವತೋಮುಖ ಅಭಿವೃದ್ಧಿಯಾದಾಗ ಮಾತ್ರವೇ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರಸ್ತೆಗಳ ನಿರ್ಮಾಣ, ಚರಂಡಿಗಳ ನಿರ್ಮಾಣ, ಕುಂಟೆಗಳ ನಿರ್ಮಾಣವೂ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಕೊಳ್ಳಲಿಕ್ಕೆ ನರೇಗಾ ಯೋಜನೆ ಸಹಕಾರಿಯಾಗಿದ್ದು ಜನರು ಈ ಯೋಜನೆಯನ್ನು ಉಪಯೋಗ ಮಾಡಿಕೊಳ್ಳಬೇಕು’ ಎಂದರು.

‘ಈಗಿನಿಂದಲೇ ಅಂತರ್ಜಲವೃದ್ಧಿ ಮಾಡದೇ ಇದ್ದರೆ ಭವಿಷ್ಯದಲ್ಲಿ ನಮ್ಮ ಮಕ್ಕಳಿಗೆ ನಾವೇ ವಿಷ ನೀಡಿದಂತಾಗುತ್ತದೆ. ಆದ್ದರಿಂದ ಅಂತರ್ಜಲ ವೃದ್ಧಿ ಮಾಡಿ ಮಕ್ಕಳ ಭವಿಷ್ಯ ಕಾಪಾಡಬೇಕು’ ಎಂದರು.

ಗ್ರಾಮದ ಮುಖಂಡರಾದ ಬೈರಪ್ಪ, ರಾಜಣ್ಣ ಮಾತನಾಡಿ ಮುಖಂಡರಾದ ಮೋಟಪ್ಪ, ಎ.ಕೇಶವಮೂರ್ತಿ, ಎ.ಮುನಿಯಪ್ಪ, ಲೋಕೇಶ್, ದೇವರಾಜ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.