ವಿಜಯಪುರ: ‘ಕೈಗಾರಿಕೆಗಳ ಸ್ಥಾಪನೆಗೆ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿ
ಕೊಂಡರೆ ಬದುಕುವುದುಕಷ್ಟಕರ’ ಎಂದು ಜೆಡಿಎಸ್ ಹೋಬಳಿ ಘಟಕದ ಅಧ್ಯಕ್ಷ ಮುನಿರಾಜು ದೂರಿದರು.

ಚನ್ನರಾಯಪಟ್ಟಣ ಹೋಬಳಿಯ 11 ಹಳ್ಳಿಗಳ ರೈತರೊಂದಿಗೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.

ಕೈಗಾರಿಕೆಗಳ ಸ್ಥಾಪನೆ ಮಾಡಬೇಕು ಎನ್ನುವ ಉದ್ದೇಶಕ್ಕಾಗಿ ರೈತರನ್ನು ಒಕ್ಕಲೆಬ್ಬಿಸಿ ಒತ್ತಾಯ ಪೂರ್ವಕವಾಗಿ ಭೂಮಿಯನ್ನು ಸ್ವಾಧೀನಪಡಿಸಿ
ಕೊಳ್ಳಲು ಹೊರಟಿರುವುದು ಖಂಡನೀಯ. ಲಾಕ್ಡೌನ್ನಿಂದ ನಗರ ಪ್ರದೇಶ ಬಿಟ್ಟು ಹಳ್ಳಿಗಳ ಕಡೆಗೆ ಬಂದಿರುವ ಯುವಕರು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ರೈತ ಮುಖಂಡ ಜಯರಾಮೇಗೌಡ ಮಾತನಾಡಿ, ರೈತರೇ ಈ ದೇಶದ ಬೆನ್ನೆಲುಬು. ಆದರೆ, ಸರ್ಕಾರ ರೈತರ ಬೆನ್ನೆಲುಬು ಮುರಿಯುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ವಿಮಾನ ನಿಲ್ದಾಣಕ್ಕಾಗಿ ಸರ್ಕಾರ ಭೂಮಿ ವಶಪಡಿಸಿಕೊಂಡ ಸಂದರ್ಭದಲ್ಲಿ ನೀಡಿದ್ದ ಭರವಸೆಯು ಇದುವರೆಗೂ ಈಡೇರಿಲ್ಲ
ಎಂದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಈ ಬಗ್ಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಗಮನ ಸೆಳೆಯಲಾಗುವುದು. ಯಾವುದೇ ಕಾರಣಕ್ಕೂ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ನಿರ್ದೇಶನ ನೀಡುವಂತೆ ಒತ್ತಾಯ ಮಾಡಲಾಗುವುದು. ಈಗಾಗಲೇ ಭೂಮಿ ಸ್ವಾಧೀನಪಡಿಸಿಕೊಂಡಿರುವ ರೈತ ಕುಟುಂಬಗಳಿಗೆ ಉದ್ಯೋಗ ನೀಡುವಂತೆ ಆದೇಶಿಸುವಂತೆಯೂ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.