ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸಿದ ಷೇರುಪೇಟೆ ಸಂವೇದಿ ಸೂಚ್ಯಂಕ

Last Updated 9 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಮುಂಬೈ: ಉಕ್ಕು ಮತ್ತು ಅಲ್ಯುಮಿನಿಯಂ ಆಮದು ನಿರ್ಬಂಧಗೊಳಿಸಲು ಗರಿಷ್ಠ ಪ್ರಮಾಣದಲ್ಲಿ ತೆರಿಗೆ ವಿಧಿಸುವ ಅಮೆರಿಕ ಸರ್ಕಾರದ ನಿರ್ಧಾರವು ದೇಶಿ ಷೇರುಪೇಟೆಗಳ ವಹಿವಾಟಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಶುಕ್ರವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 43 ಅಂಶ ಕಳೆದುಕೊಂಡು 33,307 ಅಂಶಗಳಲ್ಲಿ ಅಂತ್ಯಗೊಂಡಿತು.

ಗುರುವಾರ 318 ಅಂಶಗಳ ಚೇತರಿಕೆ ಕಂಡಿದ್ದ ಸೂಚ್ಯಂಕದ ದಿನದ ವಹಿವಾಟು ಉತ್ಸಾಹದಿಂದಲೇ ಆರಂಭವಾಯಿತು. ಆದರೆ, ಷೇರುಗಳ ಮಾರಾಟ ಒತ್ತಡ ಹೆಚ್ಚಾಗಿದ್ದರಿಂದ ಮತ್ತೆ ಕುಸಿತದ ಹಾದಿಗೆ ಮರಳಿತು.

ರಾಷ್ಟ್ರೀಯ ಷೇರುಪೇಟೆ (ನಿಫ್ಟಿ) ಸಹ 16 ಅಂಶ ಕಳೆದುಕೊಂಡು 10,226 ಅಂಶಗಳಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿತು. ವಹಿವಾಟಿನ ಒಂದು ಹಂತದಲ್ಲಿ 10,211 ಅಂಶಗಳ ಕನಿಷ್ಠ ಮಟ್ಟಕ್ಕೂ ಕುಸಿದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT