ಯೋಜನೆ ಸದ್ಬಳಕೆ; ಸಹಭಾಗಿತ್ವ ಬೇಕು : ಶಾಸಕ ನಿಸರ್ಗ ನಾರಾಯಣಸ್ವಾಮಿ

ವಿಜಯಪುರ: ‘ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪಬೇಕಾದರೆ ಜನರ ಸಹಭಾಗಿತ್ವ ಮುಖ್ಯ’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.
ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಗಂಗವಾರ ಚೌಡಪ್ಪನಹಳ್ಳಿ, ಸೋಮತ್ತನಹಳ್ಳಿ, ಮಲ್ಲೇಪುರ, ನಲ್ಲಪ್ಪನಹಳ್ಳಿ, ಹರಳೂರು, ಟಿ.ಅಗ್ರಹಾರ, ಯಲಿಯೂರು ಹ್ಯಾಡ್ಯಾಳ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ಎರಡು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶಕ್ತಿ ಮೀರಿ ಕೆಲಸ ಮಾಡಲಾಗುತ್ತಿದೆ. ಈಗಾಗಲೇ ಸಿ.ಸಿ.ರಸ್ತೆ ಕಾಮಗಾರಿಗಳು, ಡಾಂಬರು ರಸ್ತೆಗಳ ನಿರ್ಮಾಣ, ಬಮೂಲ್ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ಬಸ್ ತಂಗುದಾಣ ನಿರ್ಮಾಣ, ಸಮುದಾಯ ಭವನಗಳ ನಿರ್ಮಾಣಕ್ಕೆ ಆದ್ಯತೆ, ಸೇರಿದಂತೆ ಜನರ ನಿರೀಕ್ಷೆಯಂತೆ ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡುವ ಕೆಲಸ ಮಾಡಲಾಗುತ್ತಿದೆ’ ಎಂದರು.
ಜೆಡಿಎಸ್ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರವೀಂದ್ರ, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಮುನಿರಾಜು, ಜೆಡಿಎಸ್ ಹೋಬಳಿ ಘಟಕದ ಅಧ್ಯಕ್ಷ ಮುನಿರಾಜು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.