ಹೆಚ್ಚುತ್ತಿರುವ ಡಯಾಲಿಸಿಸ್ ಕೇಂದ್ರ: ಆತಂಕ

7
ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಶಾಸಕ ನಿಸರ್ಗ ನಾರಾಯಣಸ್ವಾಮಿ

ಹೆಚ್ಚುತ್ತಿರುವ ಡಯಾಲಿಸಿಸ್ ಕೇಂದ್ರ: ಆತಂಕ

Published:
Updated:
Deccan Herald

ವಿಜಯಪುರ: ಆರೋಗ್ಯ ರಕ್ಷಣೆ ಕುರಿತು ಜನರ ತಾತ್ಸಾರ ಮನೋಭಾವ, ಮೂತ್ರಪಿಂಡಗಳ ವೈಫಲ್ಯದಿಂದಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಕೇಂದ್ರಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಶಾಸಕ ಡಾ.ನಿಸರ್ಗ ನಾರಾಯಣಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಗೊಡ್ಲುಮುದ್ದೇನಹಳ್ಳಿ ಗ್ರಾಮದಲ್ಲಿ ಗುರುವಾರ ಅಖಿಲ ಕರ್ನಾಟಕ ನಿಖಿಲ್ ಸೈನ್ಯ ಸಮಿತಿ, ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಜನರು ಆರೋಗ್ಯ ಕುರಿತು ಹೆಚ್ಚು ತಾತ್ಸಾರ ಮಾಡುತ್ತಿದ್ದಾರೆ. ಇದರ ಫಲವಾಗಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಡಯಾಲಿಸಿಸ್ ಕೇಂದ್ರ ಹೆಚ್ಚಿಸಬೇಕಾಗಿರುವ ಅನಿವಾರ್ಯತೆ ಕಾಡುತ್ತಿದೆ ಎಂದರು.

ಗ್ರಾಮೀಣ ಭಾಗದ ಜನರು ಹೆಚ್ಚು ಹಣ ಖರ್ಚು ಮಾಡಿ ದುಬಾರಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕಾಗಿ ಆಯೋಜಿಸಲಾಗಿದ್ದು ಜನರು ಸದುಪಯೋಗಪಡಿಸಿಕೊಳ್ಳಬೇಕು. ಸ್ಥಳೀಯವಾಗಿರುವ ಆಸ್ಪತ್ರೆಗಳ ಸಿಬ್ಬಂದಿಯೂ ಜನರಲ್ಲಿ ಜಾಗೃತಿ ಮೂಡಿಸುವಂತಹ ಕೆಲಸ ಮಾಡಬೇಕು ಎಂದರು.

120ಕ್ಕೂ ಮಂದಿ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿ ಧನಸಹಾಯ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ 45ಕ್ಕೂ ಹೆಚ್ಚು ಮಂದಿಗೆ ಸಹಾಯಧನದ ಚೆಕ್‌ ವಿತರಣೆ ಮಾಡಲಾಗಿದೆ ಎಂದರು.

ಮುಖಂಡ ಎಂ.ಬಚ್ಚೇಗೌಡ ಮಾತನಾಡಿ, ಹಳ್ಳಿಗಳಲ್ಲಿ ಕೂಲಿ ಮಾಡುವಂತಹ ಜನರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರೆಲ್ಲರಿಗೂ ಉಪಯೋಗವಾಗಲಿ ಎಂದು ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಬ್ಯಾಪ್ಟಿಸ್ಟ್ ಆಸ್ಪತ್ರೆ ನಿರ್ವಾಹಕ ಶಿವಾನಂದ್ ಸ್ತ್ರೀ ರೋಗ ಕುರಿತು ಮಾಹಿತಿ ನೀಡಿದರು.

ಶಿಬಿರದಲ್ಲಿ ಹೃದಯ ತಪಾಸಣೆ, ರಕ್ತದೊತ್ತಡ, ಶ್ವಾಸಕೋಶ ತೊಂದರೆ (ಅಸ್ತಮಾ) ಮಾನಸಿಕ ಅಸ್ವಸ್ಥತೆ, ಮಧುಮೇಹ ತಪಾಸಣೆ, ಕ್ಯಾನ್ಸರ್ ಕಾಯಿಲೆಗಳ ತಪಾಸಣೆ ಮಾಡಿದರು. ಬಮೂಲ್ ಉಪಾಧ್ಯಕ್ಷ ಬಿ.ಶ್ರೀನಿವಾಸ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಆರ್.ಮುನೇಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಭೀಮರಾಜ್, ಜೆಡಿಎಸ್ ಜಿಲ್ಲಾ ಘಟಕದ ಯುವ ಕಾರ್ಯಾಧ್ಯಕ್ಷ ಬಿ.ಸುರೇಶ್ ಗೌಡ, ಆರೋಗ್ಯಾಧಿಕಾರಿ ಡಾ.ವಾಣಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮನ್ವಯಾಧಿಕಾರಿ ಶರ್ಮಿಳಾ, ಶ್ರೀರಾಮಣ್ಣ, ಕೋರಮಂಗಲ ವೀರಪ್ಪ, ಕಲ್ಯಾಣ್ ಕುಮಾರ್ ಬಾಬು, ಬಿಜ್ಜವಾರ ಆನಂದ್, ಜಿ.ಎಂ. ಹಳ್ಳಿ ಶ್ರೀನಿವಾಸ್, ಹುರುಳುಗುರ್ಕಿ ಶ್ರೀನಿವಾಸ್, ಆಪ್ತ ಸಹಾಯಕ ಮಂಜುನಾಥ್, ಬಿದಲೂರು ಶಂಕರ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !