ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತಾಶರಾದ ಎಂಟಿಬಿ: ಶರತ್ ಟೀಕೆ

Last Updated 10 ಜನವರಿ 2020, 14:07 IST
ಅಕ್ಷರ ಗಾತ್ರ

ವಿಜಯಪುರ: ‘ನೂರು ಮಂದಿ ಬಚ್ಚೇಗೌಡರು, ನೂರು ಮಂದಿ ಶರತ್‌ ಬಚ್ಚೇಗೌಡ ಬಂದರೂ ನನ್ನನ್ನು ಸೋಲಿಸಲು ಸಾಧ್ಯವಿಲ್ಲ’ಎಂದು ಹೇಳುತ್ತಿದ್ದ ಎಂ.ಟಿ.ಬಿ.ನಾಗರಾಜ್ ಅವರಿಗೆ ಜನರು ಕೊಟ್ಟ ತೀರ್ಪಿನಿಂದ ಹತಾಶರಾಗಿದ್ದಾರೆ’ ಎಂದು ಶಾಸಕ ಶರತ್‌ಬಚ್ಚೇಗೌಡ ಕುಟುಕಿದರು.

ಇಲ್ಲಿನ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ‘ನನ್ನ ಸೋಲಿಗೆ ಬಚ್ಚೇಗೌಡರೇ ಕಾರಣ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ಬಚ್ಚೇಗೌಡರು ಹೇಗೆ ಕಾರಣರಾಗುತ್ತಾರೆ. ಅವರು ಎಂದೂ ಕರಪತ್ರ ಹಿಡಿದು ನನ್ನ ಪರವಾಗಿ ಮತಯಾಚನೆ ಮಾಡಿಲ್ಲ. ಜನರಿಗೆ ವಿಶ್ವಾಸವಿತ್ತು. ನನ್ನನ್ನು ಆಯ್ಕೆ ಮಾಡಿದ್ದಾರೆ’ ಎಂದರು.

ಬಿಜೆಪಿ ಪಕ್ಷದಲ್ಲಿ ಅಂತರಿಕವಾಗಿ ಬಹಳಷ್ಟು ಗೊಂದಲಗಳಿವೆ. ಸಚಿವ ಸಂಪುಟ ವಿಸ್ತರಣೆಯಾಗುವ ತನಕ ಸಮಸ್ಯೆಗಳು ಬಗೆಹರಿಯುವುದಿಲ್ಲ. ಜಿಲ್ಲೆಯಲ್ಲಿ ಹೊಸಕೋಟೆ ಸೇರಿದಂತೆ ಎಲ್ಲ ತಾಲ್ಲೂಕುಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಇದೆ. ಜಿಲ್ಲಾಧಿಕಾರಿ ಅವರೊಂದಿಗೆ ವಿವರವಾದ ಚರ್ಚೆ ನಡೆದಿದೆ. ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳಿಗೆ ಶೀಘ್ರದಲ್ಲೇ ನೀರು ತರುವ ಪ್ರಯತ್ನ ನಡೆಯಲಿದೆ. ನೆಲಮಂಗಲ ಮತ್ತು ದೊಡ್ಡಬಳ್ಳಾಪುರಕ್ಕೂ ಸರಿದೂಗಿಸುವ ಪ್ರಯತ್ನವಿದೆ ಎಂದು ಹೇಳಿದರು. ‌

ಪೌರತ್ವ ತಿದ್ದುಪಡಿ ಕಾಯಿದೆ ಬಗ್ಗೆ ಇರುವ ಗೊಂದಲ ನಿವಾರಣೆಗೆ ಕೇಂದ್ರ ಸರ್ಕಾರ ತ್ವರಿತವಾಗಿ ಕ್ರಮಕೈಗೊಳ್ಳಬೇಕು. ಜನರು ಬೀದಿಗಿಳಿಯಲು ಅವಕಾಶ ಕೊಡಬಾರದು. ಎಲ್ಲರೂ ಸಾಮರಸ್ಯದಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT