ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ ಕರ್ತವ್ಯ ಕಾಲದ ಅಭಿವೃದ್ಧಿಯ ಅಮೃತವನ್ನು ಎಲ್ಲಾ ವರ್ಗದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಯಶಸ್ವಿಯಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ ಸೇರಿದಂತೆ ವಿವಿಧ ಸಮುದಾಯಗಳ ಸಬಲೀಕರಣದ ಬಗ್ಗೆ ದೂರದೃಷ್ಟಿ ತೋರಿದ್ದಾರೆ. ಆರೋಗ್ಯ ವಲಯಕ್ಕೆ ಭರಪೂರ ಕೊಡುಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಏಷ್ಯಾದಲ್ಲಿಯೇ ಅತಿದೊಡ್ಡ 2ನೇ ರೇಷ್ಮೆ ಮಾರುಕಟ್ಟೆಯನ್ನು ಶಿಡ್ಲಘಟ್ಟ ಹೊಂದಿದೆ. ಇಲ್ಲಿ ₹ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಿಸಲಾಗುತ್ತದೆ. ಇದು ಕೋಲಾರ, ಚಿಕ್ಕಬಳ್ಳಾಪುರ ಭಾಗದ ರೇಷ್ಮೆ ಬೆಳೆಗಾರರಿಗೆ ಸಂಭ್ರಮ ತಂದಿದೆ ಎಂದು ಸುಧಾಕರ್ ಹೇಳಿದ್ದಾರೆ.

ದ್ರಾಕ್ಷಿ ಬೆಳೆಗಾರರ ನೆರವಿಗೆ ದ್ರಾಕ್ಷಾರಸ ಮಂಡಳಿ ಮೂಲಕ ₹ 100 ಕೋಟಿ ವೆಚ್ಚದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಇದು ಕೂಡ ಚಿಕ್ಕಬಳ್ಳಾಪುರ ಭಾಗದ ದ್ರಾಕ್ಷಿ ಬೆಳೆಯುವ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವಲ್ಲಿ ಕೆ.ಸಿ. ವ್ಯಾಲಿ ಯೋಜನೆ ಮಹತ್ವದ ಪಾತ್ರವಹಿಸಿದೆ. ಈ ಯೋಜನೆಯಿಂದ ಜಿಲ್ಲೆಯ ಅಂತರ್ಜಲದ ಪ್ರಮಾಣ ಕೂಡ ಹೆಚ್ಚಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಹಿಂದಿನಿಂದಲೂ ಹೂ ಕೃಷಿಗೆ ಜನಪ್ರಿಯ. ಇದಕ್ಕೆ ಪ್ರೋತ್ಸಾಹ ನೀಡಲು ಹಾಗೂ ರಫ್ತು ಉತ್ತೇಜಿಸಲು ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಾಡುತ್ತಾರೆ ಎಂಬ ಅನೇಕರ ನಂಬಿಕೆ ಹುಸಿಯಾಗಿದೆ. ಬಜೆಟ್ ಮಂಡನೆ ಆರಂಭಕ್ಕೆ ಮುನ್ನವೇ ಕಿವಿಗೆ ಹೂ ಇಟ್ಟುಕೊಂಡು ಬಂದವರಿಗೆ ನೈತಿಕತೆ ಇಲ್ಲ ಎಂದು ದೂರಿದ್ದಾರೆ.

ಪೂರ್ವಗ್ರಹಪೀಡಿತರಾದ ಸಿದ್ದರಾಮಯ್ಯ ಅವರು ಸಿ.ಎಂ ಆಗಿ ಬಜೆಟ್ ಮಂಡಿಸುವಾಗ ಯಾವುದಾದರೂ ವಿರೋಧ ಪಕ್ಷ ಹೀಗೆ ನಡೆದುಕೊಂಡಿತ್ತೇ. ಹೀಗೆ ವರ್ತಿಸುವುದು ಔಚಿತ್ಯವೇ. ಅವರು ಹೊಸ ಪರಂಪರೆಗೆ ನಾಂದಿ ಹಾಡಿದ್ದು, ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ. ಬಜೆಟ್ನ ಪರಂಪರೆಯನ್ನು ಕಾಂಗ್ರೆಸ್ನವರು ಹಾಳು ಮಾಡಿದ್ದು, ಜನರೇ ಅವರ ಕಿವಿಗೆ ಹೂ ಇಡಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.