ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇವನಹಳ್ಳಿ | ಕೆರೆ ಏರಿ ಮೇಲೆ ತ್ಯಾಜ್ಯ: ಕ್ರಮಕ್ಕೆ ಮನವಿ

Published 6 ಜೂನ್ 2024, 15:34 IST
Last Updated 6 ಜೂನ್ 2024, 15:34 IST
ಅಕ್ಷರ ಗಾತ್ರ

ವಿಜಯಪುರ (ದೇವನಹಳ್ಳಿ): ಅಮಾನಿಕೆರೆ ಏರಿ ಮೇಲೆ ಕಟ್ಟಡದ ತ್ಯಾಜ್ಯ ಸೇರಿದಂತೆ ಕೋಳಿ ಅಂಗಡಿ ತ್ಯಾಜ್ಯ ತಂದು ಸುರಿಯಲಾಗುತ್ತಿದೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಸೂಕ್ತಕ್ರಮ ಕೈಗೊಳ್ಳುವಂತೆ ಬುಧವಾರ ಗುರುಕುಲ ಶಾಲೆ ವಿದ್ಯಾರ್ಥಿಗಳು ಪುರಸಭೆ ಮುಖ್ಯಾಧಿಕಾರಿ ಜಿ.ಆರ್.ಸಂತೋಷ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಸಭೆ ಮುಖ್ಯಾಧಿಕಾರಿ ಜಿ.ಆರ್.ಸಂತೋಷ್ ಮಾತನಾಡಿ, ಪಟ್ಟಣದಲ್ಲಿ ಎಲ್ಲೆಲ್ಲಿ ಕಸ ಹಾಕುತ್ತಿದ್ದಾರೋ ಅಂತಹ ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಕೆರೆ ಬಳಿಯಲ್ಲಿಯೂ ಅಳವಡಿಸಲಾಗುತ್ತಿದೆ ಎಂದರು.

ಪುರಸಭೆ ಕಂದಾಯ ನಿರೀಕ್ಷಕ ತ್ಯಾಗರಾಜ್, ಆರೋಗ್ಯ ನಿರೀಕ್ಷಕಿ ಲಾವಣ್ಯ, ಗುರುಕುಲ ಶಾಲೆ ಶಿಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT