ಆನೇಕಲ್: ತಾಲ್ಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೆರಟಿಗನಬೆಲೆಯಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಗಡಿ ಗ್ರಾಮಗಳಾಗಿರುವ ಗೆರಟಿಗನಬೆಲೆಯಲ್ಲಿ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಗಮನ ನೀಡಲಾಗಿದೆ. ಗೆರಟಿಗನಬೆಲೆ-ಮ್ಯಾನಾಗರ ರಸ್ತೆಯನ್ನು ಕಾಂಕ್ರಿಟ್ ರಸ್ತೆಯಾಗಿ ಅಭಿವೃದ್ಧಿ ಪಡಿಸುವುದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ ಎಂದರು.

ತಾಲ್ಲೂಕಿನ ಗೆರಟಿಗನಬೆಲೆಯಲ್ಲಿ 80 ವರ್ಷಗಳ ನಂತರ ಊರ ಹಬ್ಬ ಮಾಡಲಾಗುತ್ತಿದೆ. ಹಾಗಾಗಿ ಮುಖ್ಯ ರಸ್ತೆಯನ್ನು ಅಭಿವೃದ್ಧಿಗೆ ಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದ್ದ, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು. ಮೇ 20ರ ಒಳಗಾಗಿ ಮುಖ್ಯ ರಸ್ತೆಯನ್ನು ಸುಸಜ್ಜಿತ ರಸ್ತೆಯಾಗಿ ರೂಪಿಸಲು ಕ್ರಮ ವಹಿಸಲಾಗುವುದು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಹಾಗಡೆ ಹರೀಶ್, ಎಂ.ನಾರಾಯಣ್, ಪುಷ್ಪರಾಜು, ಬನಹಳ್ಳಿ ಅಭಿ, ಅಬ್ಬಣ್ಣ, ಕೃಪೇಂದ್ರ, ಮಾದೇಶ್ ಗೌಡ, ಕುಮಾರ್, ಹರೀಶ್ ಗೌಡ, ಸುರೇಶ್ ಗೌಡ, ಶಿವಾನಂದ ಪಾಟೀಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-15-2016304472

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.