ಸೋಮವಾರ, ಆಗಸ್ಟ್ 8, 2022
23 °C
ದೊಡ್ಡಬಳ್ಳಾಪುರ: ಯಾದವ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

‘ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಜ್ಜಾಗಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ‘ಯಾವುದೇ ಸಮುದಾಯ ಅಭಿವೃದ್ಧಿ ಆಗಬೇಕಾದರೆ ಶೈಕ್ಷಣಿಕ ಸಾಧನೆ ಅಗತ್ಯ. ಸಾಮಾನ್ಯ ಪದವಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳು ನಿಂತರ ಅಭ್ಯಾಸದಲ್ಲಿ ತೊಡಗಬೇಕು’ ಎಂದು ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ಪದ್ಮರಾಜ್ ‌ಯಾದವ್ ಹೇಳಿದರು.

ಅವರು ತಾಲ್ಲೂಕು ಯಾದವ (ಗೊಲ್ಲ) ಸಂಘದ ವತಿಯಿಂದ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಎಸ್‍ಎಸ್‍ಎಲ್‍ಸಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಯಾದವ ಸಮುದಾಯದಲ್ಲಿ ಇತ್ತೀಚೆಗೆ ಶೈಕ್ಷಣಿಕವಾಗಿ ಹಲವಾರು ಸಾಧಕರು ಇರುವುದು ಹೆಮ್ಮೆಯ ಸಂಗತಿ. ಇಂತಹ ಪ್ರತಿಭೆಗಳು ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ಸಾಧನೆ ಮಾಡುವ ಮೂಲಕ ಸಮುದಾಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತರಬೇಕು’ ಎಂದರು.

ಸಮಾರಂಭದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಬೆಳಗಾವಿ ಇವರಿಂದ ಗೌರವ ಡಾಕ್ಟರೇಟ್ ಪಡೆದ ಸುನೀಲ್‌ಯಾದವ್ ಮತ್ತು ರಾಷ್ಟ್ರೀಯ ಚಲನಚಿತ್ರ ಬಾಲನಟ ಪ್ರಶಸ್ತಿ ಪಡೆದ ಮನೋಹರ್ ಯಾದವ್ ಅವರನ್ನು ಸನ್ಮಾನಿಸಲಾಯಿತು.

ಶ್ರೀಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಪಿ.ಮುನಿರಾಜು, ರಾಜ್ಯ ಯಾದವ ಯುವಕರ ಸಂಘದ ಅಧ್ಯಕ್ಷ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನಿರ್ದೇಶಕ ಎನ್.ಕೆ.ರಮೇಶ್, ತಾಲ್ಲೂಕು ಸಂಘದ ಪದಾಧಿಕಾರಿಗಳಾದ ಕೃಷ್ಣಪ್ಪ, ಡಿ.ನಾಗರಾಜು, ಗುಮ್ಮನಹಳ್ಳಿ ಶ್ರೀನಿವಾಸ್, ವೇಣುಯಾದವ್, ಯರತಿಪ್ಪಯ್ಯ, ಲಕ್ಷ್ಮೀನಾರಾಯಣ, ಚಿನ್ನಣ್ಣ, ಸುರೇಶ್‌ಬಾಬು,ಕೃಷ್ಣಮೂರ್ತಿ, ವಿನೋದ್‌ಕುಮಾರ್, ಯುವಕರ ಸಂಘದ ಶ್ರೀನಿವಾಸ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು