ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೂಬಗೆರೆ: ವಿಜೃಂಭಣೆಯ ಘಾಟಿ ರಥೋತ್ಸವ

Published 16 ಜನವರಿ 2024, 8:19 IST
Last Updated 16 ಜನವರಿ 2024, 8:19 IST
ಅಕ್ಷರ ಗಾತ್ರ

ತೂಬಗೆರೆ (ದೊಡ್ಡಬಳ್ಳಾಪುರ): ಘಾಟಿ ಸುಬ್ರಹ್ಮಣ್ಯ‌ ರಥೋತ್ಸವ ಮಂಗಳವಾರ ಸಾವಿರಾರು ಜನರ ಹರ್ಷೋದ್ಘಾರಗಳ ಮಧ್ಯೆ ಅದ್ದೂರಿಯಾಗಿ ನಡೆಯಿತು.

ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಜನರು ರಥಕ್ಕೆ ಬಾಳೆಹಣ್ಣು, ದವನ ಎಸೆದು ಭಕ್ತಿ ಸಮರ್ಪಿಸಿದರು. ಷಷ್ಠಿಯ ದಿನವಾದ ಮಂಗಳವಾರ ಬೆಳಗಿನ ಜಾವ 3ರಿಂದಲೇ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಆರಂಭವಾದವು.  

ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ಜಾತ್ರಾ ಬಸ್ ಬಿಡಲಾಗಿದೆ.  

ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ ಒಂದು ಕಿ.ಮೀ ದೂರದಲ್ಲೇ ಬೈಕ್, ಕಾರು, ಬಸ್‌ ಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT