ಶುಕ್ರವಾರ, ಜನವರಿ 24, 2020
22 °C

ಘಾಟಿ ದೇವಾಲಯ: ₹ 51.76 ಲಕ್ಷ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ತಾಲ್ಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಸೋಮವಾರ ಹುಂಡಿ ಹಣವನ್ನು ಎಣಿಕೆ ಮಾಡಲಾಗಿದ್ದು, ಜ.1ರಂದು ಬ್ರಹ್ಮರಥೋತ್ಸವ ನಡೆದಿದ್ದರಿಂದ ಈ ಬಾರಿ ಹುಂಡಿಯಲ್ಲಿ ಹೆಚ್ಚಿನ ಹಣ ಸಂಗ್ರಹವಾಗಿದೆ.

ಈ ಬಾರಿಯೂ ವಿದೇಶಿ ನೋಟುಗಳು ಹಾಗೂ ನಿಷೇಧಿತ ನೋಟುಗಳು ಸಿಕ್ಕಿವೆ. ಈ ಬಾರಿ ಹುಂಡಿಯಲ್ಲಿ ಒಟ್ಟು ₹ 51,76,196 ಸಂಗ್ರಹವಾಗಿದೆ. ಇದರೊಂದಿಗೆ 2.2 ಕೆಜಿ ಬೆಳ್ಳಿ , 20 ಗ್ರಾಂ ಚಿನ್ನ ಹುಂಡಿಯಲ್ಲಿ ಸಿಕ್ಕಿದೆ. 11.640 ಗ್ರಾಂ ಬೆಳ್ಳಿ ನಾಣ್ಯಗಳು ಸಿಕ್ಕಿವೆ. ಅಮೆರಿಕಾ, ಇಂಡೋನೇಷಿಯಾ, ಸಿಂಗಪುರ ದೇಶಗಳ ನೋಟುಗಳು ಸಿಕ್ಕಿವೆ.

ಇದರೊಂದಿಗೆ ನಿಷೇಧಿತ ₹ 500 ಮುಖಬೆಲೆಯ 11 ಹಾಗೂ ₹ 1 ಸಾವಿರ ಮುಖಬೆಲೆಯ 18 ನೋಟುಗಳನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

ಪ್ರತಿ ತಿಂಗಳಿನಂತೆ ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು. ಮುಜರಾಯಿ ತಹಶೀಲ್ದಾರ್ ನರಸಿಂಹಯ್ಯ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ, ದೇವಾಲಯ ಅಧೀಕ್ಷಕ ನಾರಾಯಣಸ್ವಾಮಿ, ಪ್ರಧಾನ ಅರ್ಚಕ ಎನ್.ಶ್ರೀನಿಧಿ, ಇಂಡಿಯನ್ ಓವರ್‍ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.

ಪ್ರತಿಕ್ರಿಯಿಸಿ (+)