ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇಂಗ್ಲೆಂಡ್’ ಉಡುಗೊರೆ ನಂಬಿ ₹ 2.31 ಲಕ್ಷ ಕಳೆದುಕೊಂಡರು

Last Updated 17 ಮೇ 2021, 15:57 IST
ಅಕ್ಷರ ಗಾತ್ರ

ಬೆಂಗಳೂರು: ಇಂಗ್ಲೆಂಡ್‌ನಿಂದ ಉಡುಗೊರೆ ಬಂದಿರುವುದಾಗಿ ಹೇಳಿ ಶುಲ್ಕದ ಹೆಸರಿನಲ್ಲಿ ನಗರದ ಮಹಿಳೆಯೊಬ್ಬರಿಂದ ₹ 2.31 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಯಲಹಂಕ ಉಪನಗರ ನಿವಾಸಿಯಾಗಿರುವ 47 ವರ್ಷದ ಮಹಿಳೆ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮಹಿಳೆ ಮೊಬೈಲ್‌ಗೆ ಕರೆ ಮಾಡಿದ್ದ ಆರೋಪಿ, ‘ನಿಮಗೆ ಇಂಗ್ಲೆಂಡ್‌ನಿಂದ ಉಡುಗೊರೆ ಬಂದಿದೆ. ಅದರಲ್ಲಿ ವಿದೇಶಿ ಕರೆನ್ಸಿ ಹಾಗೂ ಆಭರಣಗಳಿವೆ. ಅದನ್ನು ನಿಮ್ಮ ವಿಳಾಸಕ್ಕೆ ಕಳುಹಿಸಬೇಕಾದರೆ ಶುಲ್ಕ ಹಾಗೂ ಜಿಎಸ್‌ಟಿ ಪಾವತಿಸಬೇಕು’ ಎಂದಿದ್ದರು. ಅದನ್ನು ನಂಬಿದ್ದ ಮಹಿಳೆ, ಆರೋಪಿ ಹೇಳಿದ್ದ ಖಾತೆಗಳಿಗೆ ಹಂತ ಹಂತವಾಗಿ ₹ 2.31 ಲಕ್ಷ ಜಮೆ ಮಾಡಿದ್ದರು. ನಂತರ, ಆರೋಪಿ ನಾಪತ್ತೆಯಾಗಿದ್ದಾನೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT