ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಗೀತಂ ವಿ.ವಿಯಲ್ಲಿ ವಿದ್ಯಾರ್ಥಿ ಸಾವು

Published 13 ಮಾರ್ಚ್ 2024, 21:19 IST
Last Updated 13 ಮಾರ್ಚ್ 2024, 21:19 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ರಾತ್ರಿ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಪ್ರಕರಣ ನಡೆದಿದೆ.

ಆಂಧ್ರಪ್ರದೇಶದ ಕರ್ನೂಲ್‌ ಮೂಲದ ದಾಸರಿಬ್ರಹ್ಮಸಾಯಿರೆಡ್ಡಿ (18) ಪ್ರಥಮ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ರಾತ್ರಿ ಊಟ ಮಾಡಿದ ನಂತರ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ.

ಮಗನ ಸಾವಿನ ಕುರಿತಂತೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿರುವ ಮೃತ ವಿದ್ಯಾರ್ಥಿ ತಂದೆ ವೆಂಕಟಶಿವರೆಡ್ಡಿ, ಹಾಸ್ಟೆಲ್‌ನ 6ನೇ ಮಹಡಿಯಲ್ಲಿ ಈಗಷ್ಟೇ ಕಾಮಗಾರಿ ನಡೆಯುತ್ತಿದೆ. ಇಲ್ಲಿ ಯಾವುದೇ ರೀತಿಯ ಮುಂಜಾಗೃತ ಕ್ರಮ ಕೈಗೊಂಡಿಲ್ಲ. ಕಾಲೇಜಿನ ಆಡಳಿತ ಮಂಡಳಿ ಹಾಗೂ ಕಟ್ಟಡ ಗುತ್ತಿಗೆದಾರರ ನಿರ್ಲಕ್ಷ್ಯವೇ ಮಗನ ಸಾವಿಗೆ ಕಾರಣ. ನಿರ್ಲಕ್ಷ್ಯ ವಹಿಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿಯ ತಂದೆ ನೀಡಿರುವ ದೂರಿನ ಮೇರೆಗೆ ಗ್ರಾಮಾಂತರ ಠಾಣೆ ಪೊಲೀಸರು ಗೀತಂ ವಿ.ವಿ ಉಪಕುಲಪತಿ ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT