ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ₹5 ಲಕ್ಷ ಪರಿಹಾರ ನೀಡಿ- ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ

Last Updated 14 ಜುಲೈ 2021, 5:42 IST
ಅಕ್ಷರ ಗಾತ್ರ

ಆನೇಕಲ್: ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಸರ್ಕಾರ ₹1ಲಕ್ಷ ನೆರವು ನೀಡುತ್ತಿದೆ. ಆದರೆ, ಸಂಕಷ್ಟದ ಹಿನ್ನೆಲೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ₹5ಲಕ್ಷ ನೆರವು ನೀಡಬೇಕು ಮತ್ತು ಬಿಪಿಎಲ್‌ ಕಾರ್ಡ್‌ ಇಲ್ಲದವರಿಗೂ ನೆರವು ಸಿಗುವಂತಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಒತ್ತಾಯಿಸಿದರು.

ಅವರು ತಾಲ್ಲೂಕಿನ ಚಂದಾಪುರದಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ‘ಸಹಾಯ ಹಸ್ತ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನ ತಡೆಯಲು ಲಾಕ್‌ಡೌನ್‌ ಮಾಡಲಾಗಿತ್ತು. ಬಡವರು, ಅಸಂಘಟಿತ ಕಾರ್ಮಿಕರು, ಬೀದಿ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ. ಬಿಜೆಪಿ ಸರ್ಕಾರ ಪ್ಯಾಕೇಜ್‌ ಘೋಷಿಸಿದ್ದರೂ ಸಮರ್ಥವಾಗಿ ತಲುಪುತ್ತಿಲ್ಲ. ಕಾಂಗ್ರೆಸ್‌ ಕಾರ್ಯಕರ್ತರು ಕಾರ್ಮಿಕರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಅರ್ಜಿ ತುಂಬಲು ನೆರವಾಗಬೇಕು ಎಂದು ಸಲಹೆ ನೀಡಿದರು.

ಪೆಟ್ರೋಲ್‌-ಡಿಸೇಲ್, ಸಿಲಿಂಡರ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಸೈಕಲ್‌ ಜಾಥಾ ನಡೆಸಿದೆ. ಕೊರೊನಾ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಆರೋಗ್ಯಹಸ್ತ ಕಾರ್ಯಕ್ರಮ ರೂಪಿಸಲಾಗಿದೆ. ಆದರೆ, ಆಡಳಿತ ನಡೆಸುತ್ತಿರುವವರ ಬಿಜೆಪಿ ಜನವಿರೋಧಿಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್‌ನ ಎಲ್ಲ ಮುಖಂಡರು, ಕಾರ್ಯಕರ್ತರು ಸಾಂಘಿಕ ಪ್ರಯತ್ನ ನಡೆಸಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.

ಶಾಸಕ ಬಿ.ಶಿವಣ್ಣ ಮಾತನಾಡಿ, ಕಾಂಗ್ರೆಸ್‌ ಸಂಕಷ್ಟದ ಸಮಯದಲ್ಲಿ ಜನರ ಧ್ವನಿಯಾಗಬೇಕು ಎಂಬ ಉದ್ದೇಶದಿಂದ ಕೊರೊನಾದಿಂದ ಮೃತಪಟ್ಟ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲಾಗಿದೆ. ಧನಸಹಾಯ ಮತ್ತು ಆಹಾರದ ಕಿಟ್‌ ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಆರ್‌.ಕೆ.ರಮೇಶ್‌, ಆನೇಕಲ್‌ ಪುರಸಭೆ ಅಧ್ಯಕ್ಷ ಎನ್‌.ಎಸ್‌.ಪದ್ಮನಾಭ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ಮಹಿಳಾ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷೆ ಜಯಶ್ರೀ ಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಪ್ಪ, ಮುಖಂಡರಾದ ಹರೀಶ್‌ಗೌಡ, ಲಿಂಗಣ್ಣ, ನಾಗವೇಣಿ, ಗಟ್ಟಹಳ್ಳಿ ಸೀನಪ್ಪ, ಮನೋಹರ್‌, ರವಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT