ದೇವನಹಳ್ಳಿ: ದುಬೈಯಿಂದ ದಾಖಲೆ ಇಲ್ಲದೆ ಅಕ್ರಮವಾಗಿ ತಂದಿದ್ದ 3.5 ಕೆ.ಜಿ ಚಿನ್ನವನ್ನು ಆರೋಪಿಯೊಬ್ಬ ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಲಗ್ಗೇಜ್ನಲ್ಲಿ ಇಟ್ಟು ಪರಾರಿಯಾಗಿದ್ದಾನೆ.

ವಿಮಾನ ನಿಲ್ದಾಣದಲ್ಲಿ ಶುಕ್ರವಾರ ದುಬೈನಿಂದ ಬಂದಿದ್ದ ಆರೋಪಿ 3.5 ಕೆ.ಜಿ ಚಿನ್ನದ ಬಿಸ್ಕತ್ ಕಳ್ಳ ಸಾಗಣೆಗೆ ಯತ್ನಿಸಿದ್ದ. ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆಯಿಂದ ತಪ್ಪಿಸಿಕೊಳ್ಳಲು ಚಿನ್ನದ ಬಿಸ್ಕತ್ ಇದ್ದ ಚೀಲವನ್ನು ಸಹ
ಪ್ರಯಾಣಿಕರೊಬ್ಬರ ಲಗೇಜ್ ಟ್ರಾಲಿಯಲ್ಲಿ ಇರಿಸಿ ಪರಾರಿಯಾಗಿದ್ದ.

ಚೀಲ ಗಮನಿಸಿದ ಸಹ ಪ್ರಯಾಣಿಕ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದ. ನಂತರ ಅಧಿಕಾರಿಗಳು ಚಿನ್ನ
ವಶಪಡಿಸಿಕೊಂಡಿದ್ದಾರೆ. ಬ್ಯಾಗ್ ಇಟ್ಟ ವ್ಯಕ್ತಿಯನ್ನು ಗುರುತಿಸಲು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.