ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿ

ಶನಿವಾರ, ಮೇ 25, 2019
33 °C

ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿ

Published:
Updated:
Prajavani

ವಿಜಯಪುರ: ಇಲ್ಲಿನ ಕರ್ನಾಟಕ ಅಂಧರ ಕ್ಷೇಮಾಭಿವೃದ್ಧಿ ಸಂಸ್ಧೆಯ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಚಂದನ್ ವೈ.ಎಲ್ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಕ್ಕೆ 528 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ ಎಂದು ಪ್ರಾಂಶುಪಾಲ ಪಿ.ವೆಂಕಟೇಶ್ ತಿಳಿಸಿದ್ದಾರೆ.

1985 ರಲ್ಲಿ ಆರಂಭವಾದ ಈ ಸಂಸ್ಥೆ ಎಸ್.ಎಸ್.ಎಲ್.ಸಿ.ಯಲ್ಲಿ ವ್ಯಾಸಂಗ ಮಾಡಿದ 250 ಕ್ಕೂ ಹೆಚ್ಚು ಅಂಧ ಮಕ್ಕಳಿಗೆ ಶೈಕ್ಷಣಿಕ ಬೆಳವಣಿಗೆಗೆ ಬೇಕಾಗಿರುವ ಅಗತ್ಯಗಳನ್ನು ಪೂರೈಸಿದೆ. 80 ಕ್ಕೂ ಹೆಚ್ಚು ಅಂಧರು ವಿವಿಧ ಇಲಾಖೆಗಳಲ್ಲಿ ಕೆಲಸದಲ್ಲಿ ತೊಡಗಿದ್ದಾರೆ. ಅಂಧ ಮಕ್ಕಳಲ್ಲಿ ಅಪಾರ ಪ್ರತಿಭೆಯಿದೆ. ಅದನ್ನು ಗುರುತಿಸುವ ಕೆಲಸ ಮಾಡಿದಾಗ ಅವರು ಸ್ವಯಂ ಉದ್ಯೋಗ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದು ವಸತಿ ಶಾಲೆಯ ಮುಖ್ಯಸ್ಥ ರುದ್ರೇಶ್ ತಿಳಿಸಿದ್ದಾರೆ.

ಕಾರ್ಯದರ್ಶಿ ಪರಶಿವಮೂರ್ತಿ, ರಾಮಪ್ಪ ಅವರು ವಿದ್ಯಾರ್ಥಿಗೆ ಶುಭ ಕೋರಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !