ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದಿಂದ ದ್ವೇಷದ ರಾಜಕಾರಣ: ಸಂಸದ ಡಿ.ಕೆ ಸುರೇಶ್

Last Updated 24 ಏಪ್ರಿಲ್ 2020, 14:48 IST
ಅಕ್ಷರ ಗಾತ್ರ

ಆನೇಕಲ್: ರಾಮನಗರ ಜೈಲಿನಲ್ಲಿದ್ದಪಾದರಾಯನಪುರ ಗಲಾಟೆ ಪ್ರಕರಣದ ಆರೋಪಿಗಳಲ್ಲಿ ಐವರಿಗೆ ಕೋವಿಡ್ – 19 ದೃಢಪಟ್ಟಿದ್ದು ಇಡೀ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಸಂಸದ ಡಿ.ಕೆ ಸುರೇಶ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅವರು ತಾಲ್ಲೂಕಿನ ದೊಡ್ಡಕಮ್ಮನಹಳ್ಳಿ ಗ್ರಾಮದಲ್ಲಿ ಮಂಜುನಾಥ್‌ ಮತ್ತು ಶ್ರೀನಿವಾಸ್‌ ನೀಡಿದ ಆಹಾರದ ಕಿಟ್‌ ಮತ್ತು ತರಕಾರಿ ವಿತರಿಸಿ ಮಾತನಾಡಿದರು.

ಪಾದರಾಯನಪುರ ಘಟನೆ ಸಂಬಂಧ ಆರೋಪಿಗಳ ಬಂಧನಕ್ಕೆ ಯಾವುದೇ ತಕರಾರಿಲ್ಲ. ಆದರೆ, ಗ್ರೀನ್‌ಝೋನ್‌ನಲ್ಲಿರುವ ರಾಮನಗರ ಜೈಲಿಗೆ ಕಳುಹಿಸುವುದರ ಮೂಲಕ ಜಿಲ್ಲೆಯ ಜನರ ಆತಂಕಕ್ಕೆ ಸರ್ಕಾರ ಎಡೆಮಾಡಿಕೊಟ್ಟಿದೆ. ಇದೊಂದು ದ್ವೇಷ ರಾಜಕರಣ ಎಂದು ಕಿಡಿಕಾರಿದರು.

ಸರ್ಕಾರ ರೈತರ ಪರವಾಗಿ ಕಾರ್ಯನಿರ್ವಹಿಸಬೇಕು. ರೈತರು ಬೆಳೆಗೆ ಮಾರುಕಟ್ಟೆಯಿಲ್ಲದೇ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮುಖಂಡರು ರೈತರಿಗೆ ನೆರವಾಗಬೇಕು. ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಮುಖಂಡ ದೊಡ್ಡಕಮ್ಮನಹಳ್ಳಿ ಮಂಜುನಾಥ್‌ ಮಾತನಾಡಿ, ಲಾಕ್‌ಡೌನ್‌ನಿಂದಾಗಿ ದಿನಗೂಲಿ ನೌಕರರಿಗೆ ಹಲವು ಸಮಸ್ಯೆಗಳು ಉಂಟಾಗಿವೆ. ಜೀವನ ಸಾಗಿಸುವುದೇ ದುಸ್ತರವಾಗಿದೆ. ಹಾಗಾಗಿ ದಿನಗೂಲಿ ಕಾರ್ಮಿಕರು, ಬಡವರು, ನಿರ್ಗತಿಕರು ಹೆಚ್ಚಿರುವ ಈ ಭಾಗದಲ್ಲಿ ಆಹಾರದ ಕಿಟ್‌ ಮತ್ತು ತರಕಾರಿಗಳನ್ನು ನೀಡಲಾಗಿದೆ ಎಂದರು.

ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಆರ್.ಕೆ.ರಮೇಶ್, ಕೆಪಿಸಿಸಿ ಕಾರ್ಯದರ್ಶಿ ಸುಷ್ಮಾರಾಜಗೋಪಾಲರೆಡ್ಡಿ, ಮುಖಂಡರಾದ ಏ.ಚಿನ್ನಣ್ಣ, ಶ್ರೀನಿವಾಸ್‌, ಅಚ್ಯುತರಾಜು, ಕಿರಣ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT