ಬುಧವಾರ, ಜನವರಿ 29, 2020
28 °C

19 ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಸರ್ಕಾರಿ ನೌಕರರ ತಾಲ್ಲೂಕು ಮಟ್ಟದ ಕ್ರೀಡಾಕೂಟ ನಗರದ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ ಡಿ.19 ಮತ್ತು 20ರಂದು ನಡೆಯಲಿದೆ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ಹೇಳಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆ ಕುರಿತ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮತನಾಡಿದರು.

ತಾಲ್ಲೂಕಿನ ಎಲ್ಲ ಇಲಾಖೆಗಳ ನೌಕರರು ಕಡ್ಡಾಯವಾಗಿ ಭಾಗವಹಿಸುವ ಮೂಲಕ ಕ್ರೀಡಾಕೂಟ ಯಶಸ್ವಿಗೊಳಿಸಬೇಕು. ಉದ್ಘಾಟನೆಯನ್ನು ಶಾಸಕ ಟಿ.ವೆಂಕಟರಮಣಯ್ಯ ನೆರವೇರಿಸಲಿದ್ದಾರೆ. 600ಕ್ಕು ಹೆಚ್ಚು ನೌಕಕರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಸಭೆಯಲ್ಲಿ ಉಪ ತಹಶೀಲ್ದಾರ್ ವಿಜಯಕುಮಾರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್‌.ಎಂ.ದ್ಯಾಮಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರಾಮಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್, ಬಾಶೆಟ್ಟಹಳ್ಳಿ ಪಿಡಿಒ ಕುಮಾರ್, ನೌಕರರ ಸಂಘದ ಕಾರ್ಯದರ್ಶಿ ಧನಂಜಯ್, ಮಾಧ್ಯಮ ಕಾರ್ಯದರ್ಶಿ ಶ್ರೀನಿವಾಸ್, ಸಂಘದ ನಿರ್ದೆಶಕ ನರಸಿಂಹ,ಶ್ರೀಧರ್‌, ನಗರಸಭೆ ವ್ಯವಸ್ಥಾಪಕ ಮಮತಾಜ್ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು