ದೇವನಹಳ್ಳಿ: ₹4.19 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ತಾಲ್ಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯಿತಿಯ ನೂತನ ಗ್ರಾಮ ಸೌಧ ಕಟ್ಟಡವನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಅಣ್ಣೇಶ್ವರ ಗ್ರಾಮ ಪಂಚಾಯಿತಿಯು ಇಡೀ ರಾಜ್ಯಕ್ಕೆ ಮಾದರಿ ಗ್ರಾಮ ಪಂಚಾಯಿತಿ ಎನಿಸಿಕೊಂಡಿದೆ. ರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ಹೆಚ್ಚು ತೆರಿಗೆ ಸಂಗ್ರಹ ಈ ಪಂಚಾಯಿತಿಗೆ ಬರುತ್ತಿದೆ ಎಂದು ತಿಳಿಸಿದರು.

ಹಿಂದಿನ ಅಧ್ಯಕ್ಷರು, ಹಾಲಿ ಅಧ್ಯಕ್ಷರು, ಸದಸ್ಯರು ತೆರಿಗೆಯ ಹಣ ಸದುಪಯೋಗ ಪಡೆದುಕೊಂಡು ಒಳ್ಳೆಯ ಅಭಿವೃದ್ಧಿ ಕೆಲಸ ಮಾಡುತ್ತಿದ್ದೀರಿ. ಅಭಿವೃದ್ಧಿ ಕಾರ್ಯಗಳ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಕೊಟ್ಟು ಶಾಲೆ ಅಭಿವೃದ್ಧಿ ಪಡಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದರು.

ಗ್ಯಾರಂಟಿ ಯೋಜನೆ ಜಾರಿಗೆ ತಂದ ನಂತರ ತಲಾದಾಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ತೆರಿಗೆ ಪಾವತಿ ಮಾಡುವುದರಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿ ಇದ್ದರೆ ಕರ್ನಾಟಕ ಎರಡನೇ ರಾಜ್ಯ. ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಪೋಡಿ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ರೈತರ ಜಮೀನುಗಳಿಗೆ ರಸ್ತೆ, ಸ್ಮಶಾನಕ್ಕೆ ರಸ್ತೆ ಸಂಪರ್ಕ, ಬಡವರಿಗೆ ಸೈಟ್, ಮನೆ ನೀಡುವುದು ಮೊದಲ ಆದ್ಯತೆ ನೀಡಿ ಕೆಲಸ ಮಾಡಲಾಗುತ್ತಿದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ರಾಜಣ್ಣ ಮಾತನಾಡಿದರು.

ನಿವೇಶನ ಹಂಚಿಕೆ, ಸ್ಮಶಾನಕ್ಕೆ ಜಾಗ,ಪಶು ಆಸ್ಪತ್ರೆ ನಿರ್ಮಿಸಲು ಗ್ರಾಮಸ್ಥರು ಸಚಿವರಲ್ಲಿ ಮನವಿ ಮಾಡಿದರು.

ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮಾ ಜಿ. ಮುನಿರಾಜು, ಉಪಾಧ್ಯಕ್ಷ ಮುನಿರಾಜಪ್ಪ, ಪಿಡಿಒ ಗಂಗರಾಜು, ಬಯಪ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ ಮಂಜುನಾಥ, ತಹಶೀಲ್ದಾರ್ ಅನಿಲ್ ಕುಮಾರ್, ಇಒ ಶ್ರೀನಾಥ್ ಗೌಡ ಉಪಸ್ಥಿತರಿದ್ದರು.

ಮೂರ್ನಾಲ್ಕು ತಿಂಗಳಲ್ಲಿ 2500 ನಿವೇಶನವನ್ನು ಎಲ್ಲಾ ವರ್ಗದ ಬಡವರಿಗೆ ನೀಡಲಾಗುವುದು. ಮನೆ ಇಲ್ಲದವರಿಗೆ ಮನೆ ನೀಡಲಾಗುತ್ತಿದೆ. ಪ್ರಣಾಳಿಕೆಯಂತೇ ರೈತರ ಪರ ಬಡವರ ಪರ ಕೆಲಸ ಮಾಡಲಾಗುತ್ತಿದೆ
ಕೆ.ಎಚ್.ಮುನಿಯಪ್ಪ ಜಿಲ್ಲಾ ಉಸ್ತುವಾರಿ ಸಚಿವ

ವಿವಿಧ ಕಾಮಗಾರಿ:

₹ 50 ಲಕ್ಷ ವೆಚ್ಚದಲ್ಲಿ ಮಹಿಳಾ ಕೌಶಲ್ಯಾಭಿವೃದ್ಧಿ ಭವನ ₹1.5 ಕೋಟಿ ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಇತರೆ ಸರ್ಕಾರಿ ಕಟ್ಟಡಗಳ ಸಂಕೀರ್ಣ ₹ 21 ಲಕ್ಷ ವೆಚ್ಚದಲ್ಲಿ ಚಿಕ್ಕಸಣ್ಣೆ ಗ್ರಾಮದ ಅಂಗನವಾಡಿ ಕೇಂದ್ರ ₹ 54.50 ಲಕ್ಷ ವೆಚ್ಚದಲ್ಲಿ ಬೈಚಾಪುರ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ₹25 ಲಕ್ಷ ವೆಚ್ಚದಲ್ಲಿ ಸ್ವಚ್ಛ ಸಂಕೀರ್ಣ ಘನ ಮತ್ತು ದ್ರವತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕದ ನೂತನ ಕಟ್ಟಡಗಳ ಉದ್ಘಾಟನೆಯನ್ನು ಸಚಿವ ಸಚಿವ ಕೆ.ಎಚ್. ಮುನಿಯಪ್ಪ ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.