ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಡೋನಹಳ್ಳಿ ಗ್ರಾಮ ಸಭೆ: ದೂರುಗಳಿಗೆ ಕಾಲಮಿತಿಯಲ್ಲಿ ಪರಿಹಾರ

Published 2 ಮಾರ್ಚ್ 2024, 14:03 IST
Last Updated 2 ಮಾರ್ಚ್ 2024, 14:03 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದಿರುವ ದೂರುಗಳ ಕುರಿತಂತೆ ಪಂಚಾಯಿತಿ ಕಡೆಯಿಂದಲು ಪತ್ರ ಬರೆದು ಕಾಲಮಿತಿಯೊಳಗೆ ಪರಿಹರಿಸಲಾಗುವುದು ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ನಾಗರಾಜ್‌ ಹೇಳಿದರು.

ಅವರು ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಶನಿವಾರ ನಡೆದ ಗ್ರಾಮ ಸಭೆಯಲ್ಲಿ ಮಾತನಾಡಿದರು.

ಕುಡಿಯುವ ನೀರು, ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಸಹ ನೀರು ಮಿತವಾಗಿ ಬಳಸುವುದು ಹಾಗೂ ಸ್ವಚ್ಛತೆಗೆ ಸಹಕರಿಸಬೇಕು. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತ್‌ ರಾಜ್‌ ಇಲಾಖೆ ದೂರುಗಳಿಗೆ ಸಂಬಂಧಿಸಿದಂತೆ ಆನ್‌ ವ್ಯವಸ್ಥೆ ಜಾರಿಗೆ ತರುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಗ್ರಾಮ ಪಂಚಾಯಿತಿ ವತಿಯಿಂದ ದೂರುಗಳಿಗೆ ಶೀಘ್ರವಾಗಿ ಸ್ಪಂದಿಸಲಾಗುವುದು ಎಂದು ಹೇಳಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿ ಕೈಗೊಳ್ಳಲು ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಇದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗುತ್ತಿದೆ. ಸ್ವಚ್ಛ ವಾಹಿನಿಗಳ ಖರೀದಿಗೆ ಪಂಚಾಯಿತಿಯಲ್ಲಿ ಅನುದಾನಗಳ ಕೊರತೆ ಇದೆ. ಆದಾಯ ಕಡಿಮೆ ಇರುವ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಕಡೆಯಿಂದ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಗ್ರಾಮ ಸಭೆಯಲ್ಲಿ ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ, ಹಾಡೋನಹಳ್ಳಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಮ್ಯಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯಮ್ಮ, ನೋಡಲ್ ಅಧಿಕಾರಿ ರೇಷ್ಮೆ ಇಲಾಖೆಯ ಗಿರಿಜಾಂಬ, ಹಾಪ್‌ಕಾಮ್ಸ್ ನಿರ್ದೇಶಕ ಕದ್ರಪ್ಪ,ಗ್ರಾಮ ಪಂಚಾಯಿತಿ ಸದಸ್ಯರಾದ ಮುನಿರಾಜು, ಪರಮೇಶ್, ಚಿಕ್ಕಕದ್ರಪ್ಪ, ಗ್ರಾಮದ ಮುಖಂಡರಾದ ಎಚ್.ನಾರಾಯಣಪ್ಪ, ಆರ್.ಮುದ್ದು ಕೃಷ್ಣಪ್ಪ ಇದ್ದರು. ಗ್ರಾಮ ಸಭೆಯಲ್ಲಿ ಅರಣ್ಯ ಇಲಾಖೆ, ಕೃಷಿ ಇಲಾಖೆಗೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT