ಸರ್ಜಾಪುರ(ಆನೇಕಲ್): ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆ ಗೇರಿಸುವ ಹಾಗೂ ಜಿಬಿಎಗೆ ಸೇರಿಸುವುದರಿಂದ ಅನುಕೂಲಗಿಂತ ಅನನುಕೂಲವೇ ಜಾಸ್ತಿ. ಅಲ್ಲದೆ ಗಾಂಧಿಜೀ ಅವರ ಸ್ಥಳೀಯ ಆಡಳಿತ ಪರಿಕಲ್ಪನೆಗೆ ಪೆಟ್ಟು ನೀಡುತ್ತದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಯಮರೆ ಜಯಶಂಕರ್ ಹೇಳಿದರು.

ಇಲ್ಲಿಗೆ ಸಮೀಪದ ಬಿ.ಹೊಸಹಳ್ಳಿ ಶುಕ್ರವಾರ ನಡೆದ ಯಮರೆ ಗ್ರಾಮ ಪಂಚಾಯಿತಿಯ ಮೊದಲನೇ ಸುತ್ತಿನ ಗ್ರಾಮಸಭೆಯಲ್ಲಿ ಮಾತನಾಡಿದರು.

ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಇದು ಕಡೇಯ ಗ್ರಾಮಸಭೆಗಳಾಗಿವೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜಗೇರಿಸುವ ಅಥವಾ ಮಹಾನಗರ ಪಾಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗಲಿದೆ ಎಂದರು.

ಗ್ರಾಮ ಪಂಚಾಯಿತಿಗಳಲ್ಲಿನ ಸರ್ಕಾರಿ ಜಾಗಗಳಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ಹಕ್ಕುಪತ್ರಗಳನ್ನು ನೀಡಬೇಕು. ಇಲ್ಲವಾದಲ್ಲಿ ಅವರಿಗೆ ವಸತಿಯ ಭದ್ರತೆಯೇ ಇರುವುದಿಲ್ಲ. ಯಮರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸರ್ಕಾರಿ ಜಾಗವು ಆಶ್ರಯ ಯೋಜನೆಗೆ ಮಂಜೂರಾಗಿ 30 ವರ್ಷ ಕಳೆದರೂ ಬಡವರಿಗೆ ಹಂಚಿಕೆಯಾಗಿಲ್ಲ. ಈ ಬಗ್ಗೆ ತಾಲ್ಲೂಕು ಆಡಳಿತ ಗಮನ ವಹಿಸಬೇಕು. ಸೂರಿಲ್ಲದವರಿಗೆ ಸೂರು ಕೊಡಬೇಕು ಎಂಬುದು ಗ್ರಾಮ ಪಂಚಾಯಿತಿಗಳ ಮುಖ್ಯ ಉದ್ದೇಶವಾಗಬೇಕು ಎಂದರು.

ಜಲ ಜೀವನ್ ಮಿಷನ್ ಯೋಜನೆಯಿಂದ ರಸ್ತೆಗಳು ಹಾಳಾಗುತ್ತಿವೆ. ಅನಾವಶ್ಯಕವಾಗಿ ಎಲ್ಲಂದರಲ್ಲಿ ಅಗೆಯುತ್ತಿರುವುದರಿಂದ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಂ ಯೋಜನೆಯಡಿಯಲ್ಲಿ ಎಲ್ಲಿಯೂ ಕಾಮಗಾರಿ ಪೂರ್ಣಗೊಂಡಿಲ್ಲ. ಕಾಮಗಾರಿಗೆ ವೇಗ ನೀಡಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಯಮರೆ ಗ್ರಾಮ ಪಂಚಾಯಿತಿಯ ಆಡಳಿತ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಕ್ಷಕರಿಗೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ, ಪೌರಕಾರ್ಮಿಕರು ಮತ್ತು ಗ್ರಾಮ ಪಂಚಾಯಿತಿಯ ಕಚೇರಿಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಸಿಡಿಪಿಒ ಮಹೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣ್, ಕಾರ್ಯದರ್ಶಿ ಪ್ರಸಾದ್, ನಾರಾಯಣಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-15-334814697

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.