ವಿಜಯಪುರ (ದೇವನಹಳ್ಳಿ): ಇಲ್ಲಿನ ಸಮೀಪದ ಕೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಖಿಲ ಕರ್ನಾಟಕ ಮಿತ್ರ ಸಂಘ ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಜನ್ಮ ಶತಮಾನೋತ್ಸವ ಆಚರಿಸಲಾಯಿತು.

ಮೈಸೂರು ವಿಶ್ವವಿದ್ಯಾಲಯದಲ್ಲಿ ಕುವೆಂಪು ಅವರ ಮಾರ್ಗದರ್ಶನದಲ್ಲಿ ಬೆಳೆದ ಶಿವರುದ್ರಪ್ಪ ಅವರು, ಗೋವಿಂದ ಪೈ ಹಾಗೂ ಕುವೆಂಪು ಅವರ ನಂತರ ಕನ್ನಡದ ಮೂರನೇ ರಾಷ್ಟ್ರಕವಿಯಾಗಿ ಸಾಹಿತ್ಯ, ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ಹಡಪದ್ ತಿಳಿಸಿದರು.

ಮಿತ್ರ ಸಂಘದ ಅಧ್ಯಕ್ಷ ಚಿ.ಮಾ. ಸುಧಾಕರ್ ಅವರು ಜಿ.ಎಸ್.ಶಿವರುದ್ರಪ್ಪ ಅವರ ಸಾಹಿತ್ಯ ಕೊಡುಗೆಗಳನ್ನು ಸ್ಮರಿಸಿದರು.

ಭಾವಗೀತೆ, ಜನಪದ ಗೀತೆ ಹಾಗೂ ಪ್ರಬಂಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ.ಸುರೇಶ್ ಬಾಬು ಪ್ರಶಸ್ತಿ ವಿತರಿಸಿದರು.

ಶಾಲಾ ಮುಖ್ಯಶಿಕ್ಷಕಿ ರಾಜೇಶ್ವರಿ, ಮಿತ್ರ ಸಂಘದ ಕಾರ್ಯದರ್ಶಿ ಆರ್.ಮುನಿರಾಜು, ಸಮಾಜ ಸೇವಕ ಕೆಂಚೇಗೌಡ, ಶಿಕ್ಷಕರಾದ ರಾಜಶೇಖರಾಚಾರಿ, ಗಿರಿಜಾ, ರುದ್ರೇಶ್ ಮೂರ್ತಿ, ನಾಗಲಕ್ಷಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.