ಸೋಮವಾರ, ಸೆಪ್ಟೆಂಬರ್ 20, 2021
20 °C

ಜಿಮ್ ತರಬೇತುದಾರನ ಕೊಲೆ: ಆರೋಪಿ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ವ್ಯಾಯಾಮ ಶಾಲೆಯಲ್ಲಿ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಎಂಬಾತನನ್ನು ದಂಡಿಗಾನಹಳ್ಳಿ ರಸ್ತೆಯಲ್ಲಿ ಕತ್ತು ಕೊಯ್ದು ಕೊಲೆ ಮಾಡಿದ್ದ ಆರೋಪಿ ಅರುಣ್ ಎಂಬಾತನನ್ನು ವಿಜಯಪುರ ಪೊಲೀಸರು ಬುಧವಾರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ ವ್ಯಾಯಾಮ ಶಾಲೆಗೆ ತೆರಳುತ್ತಿದ್ದ ವೇಳೆ ಶಿವಕುಮಾರ್ ಅವರನ್ನು ಕೊಲೆ ಮಾಡಲಾಗಿತ್ತು. ಈ ಇಬ್ಬರು ಸ್ನೇಹಿತರಾಗಿದ್ದರು. ತರಬೇತಿ ಪಡೆಯಲು ಬರುತ್ತಿದ್ದ ಅರುಣ್‌ಗೆ ಶಿವಕುಮಾರ್ ತರಬೇತುದಾರನಾಗಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್‌ಗೆ ಮದುವೆಯಾಗಿದ್ದು ಪಟ್ಟಣದ ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತೆಯ ಜೊತೆಗೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದ. ಈ ವಿಚಾರ ಶಿವಕುಮಾರ್‌ಗೂ ಗೊತ್ತಿತ್ತು.

ಈ ನಡುವೆ ಶಿವಕುಮಾರ್ ನಾನು ಪ್ರೀತಿಸುತ್ತಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿಟ್ಟುಕೊಳ್ಳಲು ಮುಂದಾಗಿದ್ದ. ಈ ವಿಚಾರ ತಿಳಿದು ಹಲವು ಬಾರಿ ನನ್ನ ಹುಡುಗಿಯ ತಂಟೆಗೆ ಬರಬೇಡ ಎಂದು ಬುದ್ಧಿವಾದ ಹೇಳಿದ್ದೆ. ಆದರೂ ಆತ ಕೇಳಿರಲಿಲ್ಲ. ಹಾಗಾಗಿ, ಕೊಲೆ ಮಾಡಿದೆ ಎಂದು ಪೊಲೀಸರ ಮುಂದೆ ಆರೋಪಿ ತಪ್ಪಿಕೊಂಡಿದ್ದಾನೆ.  ಈ ಸಂಬಂಧ ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.