ಆನೇಕಲ್ : ತಾಲ್ಲೂಕಿನ ಚಂದಾಪುರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ಚಿನ್ಮಯ ಸೇವಾ ಸಂಸ್ಥೆಯಿಂದ ರಾಷ್ಟ್ರ ಧ್ವಜಗಳನ್ನು ವಿತರಿಸಲಾಯಿತು.
ಚಂದಾಪುರ ಸಂತೆ, ಆಟೊ ನಿಲ್ದಾಣ ಸೇರಿದಂತೆ ವಿವಿಧೆಡೆ ರಾಷ್ಟ್ರ ಧ್ವಜಗಳನ್ನು ವಿತರಿಸಿ ರಾಷ್ಟ್ರಭಕ್ತಿಯ ಜಾಗೃತಿ ಮೂಡಿಸಲಾಯಿತು.
ಚಿನ್ಮಯ ಸೇವಾ ಸಂಸ್ಥೆಯ ಅಧ್ಯಕ್ಷ ಚಿನ್ನಪ್ಪ.ವೈ.ಚಿಕ್ಕಹಾಗಡೆ ಮಾತನಾಡಿ, ನೂರಾರು ಮಂದಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಪ್ರತಿಫಲದಿಂದ ದೊರೆತಿರುವ ಸ್ವಾತಂತ್ರ್ಯವನ್ನು ಜತನದಿಂದ ಕಾಪಾಡಿಕೊಳ್ಳಬೇಕು. ಯುವ ಸಮುದಾಯ ಸ್ವಾತಂತ್ರ್ಯ ಹೋರಾಟಗಾರರ ಜೀವನ ಸಾಧನೆಯನ್ನು ಅರಿಯಬೇಕು. ಪ್ರತಿದಿನ ಸ್ವಾತಂತ್ರ್ಯ ಹೋರಾಟಗಾರರ ಪುಸ್ತಕಗಳನ್ನು ಓದಬೇಕು ಎಂದು ಹೇಳಿದರು.
ಚಿನ್ಮಯ ಸೇವಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಗಸ್ಟ್ ತಿಂಗಳಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ. ಜಾಥಾ, ಕವಿಗೋಷ್ಠಿ, ಹೋರಾಟಗಾರರ ಜೀವನ ಸಾಧನೆ ಸ್ಮರಣೆ, ಸರ್ಕಾರಿ ಶಾಲೆಗಳಿಗೆ ಸ್ವಾತಂತ್ರ್ಯ ಪುಸ್ತಕಗಳ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.
ಚಿನ್ಮಯ ಸೇವಾ ಸಂಸ್ಥೆಯ ಚಂದಾಪುರ ಮಹೇಶ್, ಹೀಲಲಿಗೆ ನಾಗವೇಣಿ ಇದ್ದರು.