ಜಿಗಣಿ(ಆನೇಕಲ್): ಜಿಗಣಿ ಹೋಬಳಿಯ ಹಾರಗದ್ದೆಯ ಚನ್ನಕೇಶವಸ್ವಾಮಿ ರಥೋತ್ಸವ ಭಾನುವಾರ ವೈಭವದಿಂದ ನಡೆಯಿತು. ಬಿರು ಬಿಸಿಲಿನ ನಡುವೆಯೂ ಭಕ್ತರು ಉತ್ಸಾಹದಿಂದ ಪಾಲ್ಗೊಂಡರು.

ಹಾರಗದ್ದೆಯ ಆರಾಧ್ಯದೈವ ಭೂನೀಳಾ ಸಮೇತ ಚನ್ನಕೇಶವ ಸ್ವಾಮಿ ರಥೋತ್ಸವ ಪ್ರಯುಕ್ತ ಪಂಚಾಮೃತ ಅಭಿಷೇಕ ನೆರವೇರಿಸಿದ ನಂತರ ಉತ್ಸವಮೂರ್ತಿಗಳನ್ನು ಮಧ್ಯಾಹ್ನ 12.30ರ ಸುಮಾರಿಗೆ ಅಲಂಕೃತ ರಥದಲ್ಲಿ ಕುಳ್ಳರಿಸಲಾಯಿತು. ಮಂಗಳಾರತಿ, ರಥಾಂಗ ಪೂಜೆ ನಡೆದ ನಂತರ ರಥಕ್ಕೆ ಚಾಲನೆ ನೀಡಲಾಯಿತು.

ನೆರೆದಿದ್ದ ಭಕ್ತರು ಗೋವಿಂದ..ಗೋವಿಂದ.. ಎಂದು ಜಯಘೋಷ ಮಾಡಿ ದವನ ಚುಚ್ಚಿದ ಬಾಳೆಹಣ್ಣನ್ನು ರಥಕ್ಕೆ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು.

ವೀರಗಾಸೆ, ತಮಟೆ, ಪೂಜಾ ಕುಣಿತ ನಾದಸ್ವರ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮೆರಗು ನೀಡಿದವು. ರಥವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿತು. ತೇರು ಮನೆಮನೆಗಳ ಆಗಮಿಸುತ್ತಿದ್ದಂತೆ ಪೂಜೆ ಸಲ್ಲಿಸಲಾಯಿತು. ಅಲ್ಲಲ್ಲಿ ಸ್ಥಾಪಿಸಿದ್ದ ಅರವಟಿಕೆಗಳು ಭಕ್ತರ ಬಿಸಿಲ ಬೇಗೆ ತಣಿಸಿದವು. ನೀರುಮಜ್ಜಿಗೆ, ಪಾನಕ, ಕೋಸಂಬರಿ ಹಾಗೂ ದಾಸೋಹ ವ್ಯವಸ್ಥೆ ನಡೆಯಿತು.

ರಥೋತ್ಸವ ಅಂಗವಾಗಿ 50ಕ್ಕೂ ಹೆಚ್ಚು ಗ್ರಾಮದೇವತೆಗಳ ಪಲ್ಲಕ್ಕಿ ಉತ್ಸವ, ಜಾನಪದ ವೈಭವ ಕಾರ್ಯಕ್ರಮ ನಡೆಯಿತು. ಭುವನೇಶ್ವರಿ ಕಲಾ ಸಂಘದ ಪದಾಧಿಕಾರಿಗಳು ಬೆಳಗಿನಿಂದಲೂ ಅನ್ನಸಂತರ್ಪಣೆ ಏರ್ಪಡಿಸಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ರಥವು ಸಂಚರಿಸಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-15-870191087

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.