ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ರೀಡೆಯಿಂದ ಸಾಮರಸ್ಯ ವೃದ್ಧಿ’

Last Updated 10 ಆಗಸ್ಟ್ 2019, 14:15 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ಒತ್ತಡದ ಜೀವನಕ್ಕೆ ಕ್ರಿಕೆಟ್‌ನಂತಹ ಕ್ರೀಡೆ ಉಲ್ಲಾಸ ನೀಡಬಲ್ಲದು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಕಲ್ಪನಾ ಅಭಿಪ್ರಾಯಪಟ್ಟರು.

ಇಲ್ಲಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿವಿಧ ಇಲಾಖೆ ಹಾಗೂ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿಶನಿವಾರ ನಡೆದ ‘ಸ್ವಾತಂತ್ರ್ಯೋತ್ಸವ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ’ಗೆ ಬ್ಯಾಟಿಂಗ್ ಮಾಡುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

‘ಜವಾಬ್ದಾರಿಯುತ ಹುದ್ದೆಗಳ ಕರ್ತವ್ಯ ನಿರ್ವಹಿಸುವ ಮಾಧ್ಯಮ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ, ಕ್ರೀಡೆಗಳನ್ನು ಆಯೋಜನೆ ಮಾಡಿರುವುದು ಸಂತಸದ ವಿಚಾರ. ಮಾಧ್ಯಮದವರು, ಪೊಲೀಸರು, ಶಿಕ್ಷಕವರ್ಗ, ಕಂದಾಯ ಇಲಾಖೆಯವರು ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವುದು ಸ್ವಾಗತಾರ್ಹ’ ಎಂದರು.

ತಹಶೀಲ್ದಾರ್ ಸುದರ್ಶನ್ ಮಾತನಾಡಿ, ‘ಕ್ರೀಡೆ ಸ್ನೇಹ ಹಾಗೂ ವಿಶ್ವಾಸ ವೃದ್ಧಿಸುತ್ತದೆ. ಸೌಹಾರ್ದಯುತ ಕ್ರೀಡೆಯಿಂದ ಎಲ್ಲರೂ ಸಂತಸದಿಂದ ಬೆರೆಯಲು ಅವಕಾಶ ಸಿಗುತ್ತದೆ’ ಎಂದರು.

ಹಿರಿಯ ಪತ್ರಕರ್ತ ಸು.ತ.ರಾಮೇಗೌಡ, ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಪ್ರಕಾಶ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಟಿ.ತಿಮ್ಮೇಗೌಡ, ಪ್ರಧಾನ ಕಾರ್ಯದರ್ಶಿ ನಿಂಗಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್, ರಾಜ್ಯ ಪತ್ರಕರ್ತರ ಸಂಘದ ಕಾರ್ಯದರ್ಶಿ ಮತ್ತೀಕೆರೆ ಜಯರಾಮು, ರಾಜ್ಯ ಸಮಿತಿಯ ಮಾಜಿ ಸದಸ್ಯ ಸು.ನಾ.ನಂದಕುಮಾರ್, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಿ.ಗುರುಮೂರ್ತಿ, ಜಿಲ್ಲಾ ಸಂಘದ ಮಾಜಿ ಉಪಾಧ್ಯಕ್ಷ ಶಿವಮಾದು ಭಾಗವಹಿಸಿದ್ದರು.

ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಿಕ್ಷಣ ಇಲಾಖೆ ತಂಡ ಪ್ರಥಮ ಸ್ಥಾನ, ಪೊಲೀಸ್ ಇಲಾಖೆ ತಂಡ ದ್ವಿತೀಯ ಸ್ಥಾನ ಗಳಿಸಿತು. ತೀರ್ಪುಗಾರರಾಗಿ ದೈಹಿಕ ಶಿಕ್ಷಣಹಿರಿಯ ಶಿಕ್ಷಕರಾದ ರಾಜು, ಪ್ರದೀಪ್ ಕುಮಾರ್, ಹಿರೇಮಠ್, ಅನಿಲ್ ಕುಮಾರ್ ಕಾರ್ಯ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT