ಹಾರೋಹಳ್ಳಿ: ನಾಲ್ಕು ದಿನಗಳ ಹಿಂದೆ ಹಾರೋಹಳ್ಳಿ ಪಟ್ಟಣದಲ್ಲಿ ನಡೆದಿದ್ದ ವೃದ್ಧೆಯ ಚಿನ್ನದ ಮಾಂಗಲ್ಯಸರ ಕಳ್ಳತನ ಮತ್ತು ಆನೇಕಲ್ನಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಕುವೆಂಪು ನಗರದ ಆಟೊ ಚಾಲಕ ಲೋಕೇಶ(41), ಆನೇಕಲ್ ತಾಲ್ಲೂಕು ಮಟ್ಟನಹಳ್ಳಿಯ ಲಾರಿ ಚಾಲಕ ರಮೇಶ್ ವಿ.(43) ಬಂಧಿತರು. ಲಕ್ಷ್ಮಮ್ಮ ಅವರನ್ನು ಅಡ್ಡಗಟ್ಟಿದ ಬೈಕ್ನಲ್ಲಿದ್ದ ಅಪರಿಚಿತರಿಬ್ಬರು, ಅವರ ಚಿನ್ನದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತರಿಂದ ಸುಮಾರು ₹4 ಲಕ್ಷ ಮೌಲ್ಯದ 26 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಈ ಬೈಕ್ ಅನ್ನು ಕೆಲವು ದಿನಗಳ ಹಿಂದೆ ಆನೇಕಲ್ನಲ್ಲಿ ಕಳ್ಳತನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-15-202048384

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.